ಡಾ. ಡಿ. ವೀರೇಂದ್ರ ಹೆಗ್ಗಡೆ & ಹೇಮಾವತಿ ವಿ ಹೆಗ್ಗಡೆ ಸಿರಿ ಸಂಸ್ಥೆಗೆ ಭೇಟಿ

0

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಸಂಸ್ಥಾಪಕರಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು & ಹೇಮಾವತಿ ವಿ ಹೆಗ್ಗಡೆಯವರು ಜೂ: 24 ರಂದು ಬೆಳ್ತಂಗಡಿಯಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಗೆ ಭೇಟಿ ನೀಡಿದರು.

ಸಿರಿ ಸಂಸ್ಥೆಯ ವಿವಿಧ ಉತ್ಪನ್ನಗಳ ಉತ್ಪಾದನಾ ವಿಭಾಗಗಳಿಗೆ ಭೇಟಿ ನೀಡಿ, ಇಲ್ಲಿ ನಡೆಯುತ್ತಿರುವ ಉತ್ಪಾದನಾ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದ ದಂಪತಿಗಳು, ಸಿರಿ ಸಿಬ್ಬಂದಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಶುಭ ಹಾರೈಸಿದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರು ಪೂಜ್ಯ ದಂಪತಿಗಳನ್ನು ಹಾಗೂ ಪರಮಪೂಜ್ಯ ಹೆಗ್ಗಡೆಯವರ ಮೊಮ್ಮಗಳಾದ ಕು| ಮಾನ್ಯರವರರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಬಡ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣದ ಧ್ಯೇಯೋದ್ದೇಶದಿಂದ ಸಿರಿ ಸಂಸ್ಥೆಗೆ ಸುಸಜ್ಜಿತವಾದ, ಭವ್ಯ ನೂತನ ಕಟ್ಟಡವನ್ನು ನಿರ್ಮಿಸಿಕೊಟ್ಟು, ಇಲ್ಲಿ ಕೆಲಸಮಾಡುವ ಸಿಬ್ಬಂದಿಗಳಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಮೂಲಕ ಸಿರಿ ಸಿಬ್ಬಂದಿಗಳ ಶ್ರೇಯೋಭಿವೃದ್ಧಿಯನ್ನು ಬಯಸುತ್ತಿರುವ ಪೂಜ್ಯರಿಗೆ ಹಾಗೂ ಹೇಮಾವತಿ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿ, ಸಿರಿ ಸಂಸ್ಥೆಯ ವತಿಯಿಂದ ಗೌರವಾರ್ಪಣೆಗಳನ್ನು ಸಮರ್ಪಿಸಿದರು

ಈ ಸಂದರ್ಭದಲ್ಲಿ ಸೇಲಂನಲ್ಲಿರುವ ಇಸ್ಕಾನ್ ದೇವಾಲಯದ ಶ್ರೀರಾಮಪ್ರಭು ಚಂದನದಾಸ ಸ್ವಾಮೀಜಿಯವರು, ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ರಾಜೇಶ್ ಪೈ, ಎಸ್.ಕೆ.ಡಿ.ಆರ್.ಡಿ.ಪಿ ಬಿ.ಸಿ ಟ್ರಸ್ಟ್ ನ ಟ್ರಸ್ಟಿಗಳಾದ ಡಾ. ಹರೀಶ್ ಕೃಷ್ಣ ಸ್ವಾಮಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here