









ಕಾಯರ್ತಡ್ಕ ; ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ಕಾರ್ಯಕ್ರಮ ನಡೆಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಂಡಿದ್ದು ಯೋಗ ಪ್ರದರ್ಶನ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಪ್ರೇಮ ರವರು ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಯೋಗದ ಮಹತ್ವ ಹಾಗೂ ಉಪಯುಕ್ತತೆಯ ಕುರಿತು ಮಕ್ಕಳಿಗೆ ತಿಳಿಸಿದರು. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯಲ್ಲಿ ಯೋಗದ ಮಹತ್ವವನ್ನು ತಿಳಿಹೇಳಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಸ್ನಾ ಮ್ಯಾಥ್ಯೂ, ದೈಹಿಕ ಶಿಕ್ಷಣ ಶಿಕ್ಷಕ ಮಹೀನ್ ಹಾಗೂ ಇತರ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿದ್ದರು.









