







ಅರಸಿನಮಕ್ಕಿ, ಜೂನ್ 25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ರಿ., ಬೆಳ್ತಂಗಡಿ ತಾಲೂಕು, ಅರಸಿನಮಕ್ಕಿ ವಲಯದ ಪೆರ್ಲ ಕಾರ್ಯಕ್ಷೇತ್ರದ ಧರಣಿ ಜ್ಞಾನ ವಿಕಾಸ ಕೇಂದ್ರದ ಸಭೆಯು ಕೇಂದ್ರದ ಅಧ್ಯಕ್ಷೆ ಹೇಮಾವತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಕಾರ್ಯಕ್ರಮದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿ.ಎಸ್.ಐ. ನಿಧಿ ಗೌಡ ಅವರು ಸೈಬರ್ ಅಪರಾಧಗಳು, ಪೋಕ್ಸೋ ಕಾಯ್ದೆ ಹಾಗೂ ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿ, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಎಚ್ಚರಿಕೆಯಿಂದಿರಬೇಕಾದ ಅಗತ್ಯವನ್ನು ವಿವರಿಸಿದರು.

ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಮಾಂತೇಶ್ ಹಾಗೂ ದೀಪಾ ಅವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್, ಸೇವಾ ಪ್ರತಿನಿಧಿ ಅರುಣಾ ಹಾಗೂ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.ಸರೋಜಿನಿ ಅವರು ಸ್ವಾಗತಿಸಿ, ಯಮುನಾ ಅವರು ವಂದಿಸಿದರು. ಕಾರ್ಯಕ್ರಮವು ಮಾಹಿತಿ ಮತ್ತು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.









