






ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಜೂ. 26 ರಂದು ಬೆಳಗ್ಗೆ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಕೇಸರಿ ಶಾಲು ಧರಿಸಿದ್ದ ವಿಜಯೇಂದ್ರ ಅವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ದೇವಸ್ಥಾನದ ಆವರಣದಲ್ಲಿ ಕಾಣಿಸಿಕೊಂಡರು. ಬಿಳಿ ಪಂಚೆ, ಶಾಲು ಧರಿಸಿದ್ದ ಸ್ಥಳೀಯ ಮುಖಂಡರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ದ. ಕ ಸಂಸದ ಬ್ರಿಜೇಶ್ ಚೌಟ, ದ. ಕ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಾಲ, ಜಯಂತ್ ಕೋಟ್ಯಾನ್ ಮರೋಡಿ, ಹಾಗೂ ದ. ಕ ಶಾಸಕರು, ಗಣ್ಯರು ಅವರೊಂದಿಗೆ ಉಪಸ್ಥಿತರಿದ್ದರು.



ಜೂ. 25 ರಂದು ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿದ್ದ ಅವರು, ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ನಂತರ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಭಕ್ತರೊಂದಿಗೆ ಸಂವಾದ: ದೇವಸ್ಥಾನದ ಹೊರ ಆವರಣದಲ್ಲಿ ಭಕ್ತರು ಮತ್ತು ಪಕ್ಷದ ಕಾರ್ಯಕರ್ತರೊಂದಿಗೆ ವಿಜಯೇಂದ್ರ ಅವರು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಶಾಸಕರುಗಳಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಲ್ಯ ಸೇರಿದಂತೆ ಕರಾವಳಿ ಭಾಗದ ಶಾಸಕರು, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ವೀರುಶೆಟ್ಟಿ ಧರ್ಮಸ್ಥಳ, ಪಾರ್ಶ್ವನಾಥ ಜೈನ್ ಧರ್ಮಸ್ಥಳ ಹಾಗೂ ಪ್ರಮುಖ ನಾಯಕರು ಉಪಸ್ಥಿತರಿದ್ದರು.









