






ಬೆಳ್ತಂಗಡಿ: ಮಹಿಳಾ ಸಬಲೀಕರಣಕ್ಕೆ ಪೂರಕವಾಗಿ ಇಲ್ಲಿನ ದಕ್ಷಿಣ ಕನ್ನಡ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ರಿ.) ವತಿಯಿಂದ ಮಹಿಳೆಯರಿಗಾಗಿ ಲಿಂಗ ಸಮಾನತೆ ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.


ಬೆಳ್ತಂಗಡಿಯ ಸಂತೋಮ್ ಟವರ್‌ನಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಫಾದರ್ ಆದರ್ಶ್ ಜೋಸೆಫ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳಾ ಸಬಲೀಕರಣದಲ್ಲಿ ಲಿಂಗ ಸಮಾನತೆಯ ಪಾತ್ರ ಪ್ರಮುಖವಾದದ್ದು ಎಂದರು.
ಮಂಗಳೂರಿನ ಪ್ರಸಿದ್ಧ ವಕೀಲರು ಹಾಗೂ ಗೌರವಾನ್ವಿತ ಸಿಸ್ಟರ್ ಆಗಿರುವ ಸೌಮ್ಯ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಲಿಂಗ ಸಮತ್ವದ ಕಾನೂನಾತ್ಮಕ ಮತ್ತು ಸಾಮಾಜಿಕ ಆಯಾಮಗಳ ಕುರಿತು ತರಬೇತಿ ಹಾಗೂ ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸ್ಥಳೀಯ ಮಹಿಳೆಯರು ಉಪಸ್ಥಿತರಿದ್ದರು.









