ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ರಾಷ್ಟ್ರೀಯ ಸೇವಾ ಯೋಜನೆಯ ವಿಭಾಗೀಯ ಅಧಿಕಾರಿಯ ಭೇಟಿ

0

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಎನ್‌ಎಸ್‌ಎಸ್ ವಿಭಾಗೀಯ ಅಧಿಕಾರಿ ಸವಿತಾ ಏರ್ಮಳ್ ಅವರು ಜೂ.27ರಂದು ಭೇಟಿ ನೀಡಿ, ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ಚಟುವಟಿಕೆಗಳ ಕುರಿತು ಪರಿಶೀಲನೆ ನಡೆಸಿದರು.

ಅವರು ಎನ್‌ಎಸ್‌ಎಸ್ ಘಟಕದ ಕಾರ್ಯವೈಖರಿ, ದಾಖಲಾತಿಗಳು ಹಾಗೂ ವಿವಿಧ ಸೇವಾ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದು, ಮುಂದಿನ ದಿನಗಳಲ್ಲಿ ಸಮಾಜಮುಖಿ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಯೋಜಿಸುವಂತೆ ಮಾರ್ಗದರ್ಶನ ನೀಡಿದರು.

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಸಾಮಾಜಿಕ ಕಳಕಳಿ ಹಾಗೂ ಸೇವಾ ಮನೋಭಾವ ಬೆಳೆಸುವಲ್ಲಿ ಎನ್‌ಎಸ್‌ಎಸ್‌ನ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿಗಳು ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಭೇಟಿ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ಎನ್‌ಎಸ್‌ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here