






ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ. 27ರಂದು ಶಿಕ್ಷಕ ರಕ್ಷಕ ಸಂಘದ ಮಹಾಸಭೆಯು ನೆರವೇರಿತು. ಸಂಘದ ಕಾರ್ಯದರ್ಶಿ ಎಲ್ವಿಟಾ ಪಾಯ್ಸ್ ಗತಸಭೆಯ ವರದಿಯನ್ನು ಮಂಡಿಸಿದರು.


ಶಾಲಾ ಮುಖ್ಯೋಪಾಧ್ಯಾಯ ಫಾ. ಕ್ಲಿಫರ್ಡ್ ಪಿಂಟೋರವರು ಮುಖ್ಯ ಅತಿಥಿಯವರನ್ನು ಪರಿಚಯಿಸಿ, ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯ ಯೋಜನೆಗಳ ಪಕ್ಷಿನೋಟವನ್ನು ಸಭೆಯ ಮುಂದಿಟ್ಟರು. 2025-26ನೇ ಶೈಕ್ಷಣಿಕ ವರ್ಷದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಹಾಗೆಯೇ ಶಾಲೆ ನೂರು ಶೇಕಡಾ ಫಲಿತಾಂಶ ಪಡೆಯಲು ಶ್ರಮವಹಿಸಿದ ಶಿಕ್ಷಕ ವೃಂದವನ್ನು ಅಭಿನಂದಿಸಲಾಯಿತು.
ಕಳೆದ ಶೈಕ್ಷಣಿಕ ವರ್ಷದಲ್ಲಿ ನೂರು ಶೇಕಡಾ ಹಾಜರಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನವನ್ನು ವಿತರಿಸಲಾಯಿತು. ಶಾಲೆಗೆ ಹೊಸದಾಗಿ ನೇಮಕಗೊಂಡ ಸಹ ಶಿಕ್ಷಕಿಯರನ್ನು ಸ್ವಾಗತಿಸಲಾಯಿತು. ಸಂಸ್ಥೆಯ ಜೊತೆ ಕಾರ್ಯದರ್ಶಿ ಫಾ. ವೋಲ್ಟರ್ ಡಿಮೆಲ್ಲೋ ರವರು ಪೋಷಕರು ಮನೆಯಲ್ಲಿ ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಯ ಕಡೆಗೆ ಜಾಗ್ರತೆಯನ್ನು ವಹಿಸಬೇಕು. ಕಲಿಕೆಗೆ ಸೂಕ್ತ ವಾತಾವರಣವನ್ನು ಕಲ್ಪಿಸಬೇಕೆಂದು ನುಡಿದರು. ಪೋಷಕರು ತಮ್ಮ ನಡವಳಿಕೆಯಿಂದ ಮಕ್ಕಳಿಗೆ ಮಾದರಿಯಾಗಬೇಕು. ಮಕ್ಕಳು ವರ್ತನೆಯಲ್ಲಿ ಎಡವಿದರೆ ಅವರನ್ನು ಭಾವನಾತ್ಮಕವಾಗಿ ಪ್ರೀತಿಯಿಂದ ಸೂಕ್ಷ್ಮವಾಗಿ ಬದಲಿಸುವುದು ಪೋಷಕರ ಜವಾಬ್ದಾರಿ ಎಂದು ಮುಖ್ಯ ಅತಿಥಿ ಮಡಂತ್ಯಾರು ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪನ್ಯಾಸಕ ಮ್ಯಾಥ್ಯೂ ಎಂ.ಎನ್ ಅವರು ಮನಮುಟ್ಟುವಂತೆ ನುಡಿದರು.
ಶಾಲಾ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ರಿಚರ್ಡ್ ಸಿಕ್ವೇರಾರವರು ಉಪಸ್ಥಿತರಿದ್ದರು. ಸಹಶಿಕ್ಷಕಿಯರಾದ ಅನಿತಾ ಸ್ವಾಗತಿಸಿ, ಸುಮಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಶ್ವೇತಾ ವಂದಿಸಿದರು.









