ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

0

ಬೆಳ್ತಂಗಡಿ, ಜೂ. 29: ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೋಮವಾರ ಪೂರ್ವಾಹ್ನ 10 ಗಂಟೆಗೆ ಬೃಹತ್ ಸ್ವಚ್ಛತಾ ಅಭಿಯಾನವನ್ನು ವಿವಿಧ ಸಂಘ-ಸಂಸ್ಥೆಗಳ ಜಂಟಿ ಸಹಕಾರದೊಂದಿಗೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ–ಅರಸಿನಮಕ್ಕಿ ಘಟಕದ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪ್ರಿಯಾ, ಸೇವಾಪ್ರತಿನಿಧಿ ರಶ್ಮಿತಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸ್ವಸಹಾಯ ಸಂಘ ಮತ್ತು ಸ್ತ್ರೀಶಕ್ತಿ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.ಸ್ವಚ್ಛತೆ, ಪರಿಸರ ಸಂರಕ್ಷಣೆ ಹಾಗೂ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಅಭಿಯಾನದಲ್ಲಿ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸಿ, ಪರಿಸರವನ್ನು ಶುಚಿಯಾಗಿ ಕಾಪಾಡುವ ಸಂಕಲ್ಪವನ್ನು ಎಲ್ಲರೂ ಕೈಗೊಂಡರು.

LEAVE A REPLY

Please enter your comment!
Please enter your name here