ಒಂದೇ ದಿನದ ಮಳೆಗೆ ಕೆರೆಯಂತಾದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗ – ಕಕ್ಕಿಂಜೆ–ನೆರಿಯ ರಸ್ತೆ ಜಲಾವೃತ

0

ಬೆಳ್ತಂಗಡಿ: ಒಂದೇ ದಿನ ಸುರಿದ ಭಾರೀ ಮಳೆಯಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದ ಕಕ್ಕಿಂಜೆ–ನೆರಿಯ ರಸ್ತೆ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ.

ರಸ್ತೆಯಲ್ಲಿ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಮರ್ಪಕ ಚರಂಡಿ ವ್ಯವಸ್ಥೆಯ ಕೊರತೆಯಿಂದ ಮಳೆ ನೀರು ರಸ್ತೆಯಲ್ಲೇ ಸಂಗ್ರಹವಾಗುತ್ತಿದ್ದು, ಸಂಚಾರಕ್ಕೂ ಅಡಚಣೆ ಉಂಟಾಗಿದೆ.

ಸ್ಥಳೀಯರು ಹಲವು ಬಾರಿ ಸಮಸ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಮರುಕಳಿಸುತ್ತಿದ್ದು, ಕೂಡಲೇ ಸಮರ್ಪಕ ನೀರು ಹರಿವಿನ ವ್ಯವಸ್ಥೆ ಕಲ್ಪಿಸಿ ರಸ್ತೆ ಜಲಾವೃತ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here