100ಕ್ಕೂ ಅಧಿಕ ಯಶಸ್ವಿ ಪ್ರದರ್ಶನಗಳ ಸಂಭ್ರಮ; ಶಿಶಿಲ ಶಾಲೆಯಲ್ಲಿ ಸಂಭ್ರಮ ಹಂಚಿಕೊಂಡ ‘ರಾಘು ಮಾಸ್ಟರ್’ ತಂಡ

0

ಶಿಶಿಲ: 100ಕ್ಕೂ ಹೆಚ್ಚು ಯಶಸ್ವಿ ನಾಟಕ ಪ್ರದರ್ಶನಗಳನ್ನು ನೀಡಿದ ಸಂಭ್ರಮದ ಅಂಗವಾಗಿ ಪ್ರಸನ್ನ ಶೆಟ್ಟಿ ಬೈಲೂರು ಹಾಗೂ ಅವರ ತಂಡದವರು ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಸಂಭ್ರಮವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಸನ್ನ ಶೆಟ್ಟಿ ಅವರು, “‘ರಾಘು ಮಾಸ್ಟರ್’ ನಾಟಕವು 100ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ಕಾಣಲು ಅನೇಕ ಸಂಘ-ಸಂಸ್ಥೆಗಳು ಹಾಗೂ ಶಾಲೆಗಳ ಸಹಕಾರವೇ ಪ್ರಮುಖ ಕಾರಣವಾಗಿದೆ. ಅವುಗಳಲ್ಲಿ ಶಿಶಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಒಂದು.

ಈ ಸಂತಸದ ಕ್ಷಣವನ್ನು ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರೊಂದಿಗೆ ಹಂಚಿಕೊಳ್ಳುವ ಉದ್ದೇಶದಿಂದ ಇಲ್ಲಿಗೆ ಬಂದಿದ್ದೇವೆ,” ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮೋಹನ್ ಗೌಡ, ಮುಖ್ಯಶಿಕ್ಷಕಿ ಶ್ರೀಮತಿ ಸರಸ್ವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಸದಸ್ಯರಾದ ಭುವನ್ ಕುಮಾರ್ ಹಾಗೂ ಮನೋಜ್, ಶಾಲೆಯ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಮತ್ತು ಪ್ರಸನ್ನ ಶೆಟ್ಟಿ ಅವರ ತಂಡದ ಸದಸ್ಯರು ಉಪಸ್ಥಿತರಿದ್ದರು.ಕಾರ್ಯಕ್ರಮದ ಅಂಗವಾಗಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಿ ಸಂಭ್ರಮವನ್ನು ಆಚರಿಸಲಾಯಿತು.

LEAVE A REPLY

Please enter your comment!
Please enter your name here