ಕನ್ಯಾಡಿ-2 ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

0

​ಧರ್ಮಸ್ಥಳ: ಇಲ್ಲಿನ ಕನ್ಯಾಡಿ-2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ಆರೋಗ್ಯಕರ ವೃದ್ಧಿಗಾಗಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.

​ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (SDMC) ಅಧ್ಯಕ್ಷರಾದ ಕೆ. ನಂದ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.​ಈ ಸಂದರ್ಭದಲ್ಲಿ ಹಾರ್ಟ್‌ಫುಲ್‌ನೆಸ್ ಧ್ಯಾನ ಕೇಂದ್ರ, ಕನ್ಯಾಡಿ-2 ಇದರ ತರಬೇತುದಾರರಾದ ವತ್ಸಲ ಮತ್ತು ಶ್ರೀಮತಿ ಸಾವಿತ್ರಿ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ವಿವಿಧ ಯೋಗಾಸನಗಳನ್ನು ಪ್ರಾತ್ಯಕ್ಷಿಕೆಯೊಂದಿಗೆ ಅಚ್ಚುಕಟ್ಟಾಗಿ ಕಲಿಸಿಕೊಟ್ಟರು.

ಯೋಗದ ಮಹತ್ವ ಮತ್ತು ದೈನಂದಿನ ಜೀವನದಲ್ಲಿ ಅದರ ಅವಶ್ಯಕತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.​ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಉಪಾಧ್ಯಕ್ಷೆ ಹೇಮಲತಾ, ಸಮಿತಿಯ ಸರ್ವ ಸದಸ್ಯರು, ಶಾಲಾ ಶಿಕ್ಷಕ ವೃಂದದವರು ಹಾಗೂ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಯೋಗದ ಪ್ರಯೋಜನಗಳನ್ನು ಪಡೆದುಕೊಂಡರು.

ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತ ಮತ್ತು ವಂದನಾರ್ಪಣೆಯನ್ನು ನೆರವೇರಿಸಿದರು.

LEAVE A REPLY

Please enter your comment!
Please enter your name here