ರಾಷ್ಟ್ರ ಮಟ್ಟದ ಸಿಎ ಪರೀಕ್ಷೆ : ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

0

ಗುರುವಾಯನಕೆರೆ : ದಿ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಭಾರತದ ಅತ್ಯಂತ ಕಠಿಣ ಪರೀಕ್ಷೆಯೆನಿಸಿಕೊಂಡ ರಾಷ್ಟ್ರ ಮಟ್ಟದ ಸಿಎ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳಾದ ಶ್ರೀವತ್ಸ ಯು, ಸಮ್ಮೇದ್ ಬಾಹುಬಲಿ ಬಾಬಗೊಂಡ್, ಯಾನ ಪೊನ್ನಮ್ಮ ಅವರು ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳಾಗಿದ್ದು, ತಮ್ಮ ಪ್ರಥಮ ಯತ್ನದಲ್ಲೇ ಸಿಎ ಇಂಟರ್ ಮೀಡಿಯೇಟ್ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ರಾಷ್ಟ್ರ ಮಟ್ಟದಲ್ಲಿ ಕೇವಲ 20 ಶೇಕಡಾ ವಿದ್ಯಾರ್ಥಿಗಳು ಮಾತ್ರ ಆಯ್ಕೆಯಾದ ಈ ಪರೀಕ್ಷೆಯಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿರುವುದು ಅತ್ಯಂತ ಅಭಿಮಾನದ ವಿಷಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಹರ್ಷ ವ್ಯಕ್ತ ಪಡಿಸಿದ್ದಾರೆ.

ಸಾಧಕರನ್ನು ಅಧ್ಯಕ್ಷರು, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here