







ಬೆಳಾಲು: ಇಲ್ಲಿನ ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಜೂ. 4ರಂದು ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿಯ ವತಿಯಿಂದ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ನೀಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಿದರು.


ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ,,ಉಪಾಧ್ಯಕ್ಷ ಶಶಿಧರ್,ಕೋಶಾಧಿಕಾರಿ ಗಣೇಶ್ ಕನಿಕ್ಕಿಲ, ಸದಸ್ಯರು ಮತ್ತು ಮಾಯಾ ಫ್ರೆಂಡ್ಸ್ ಮಾಯ ಇದರ ಅಧ್ಯಕ್ಷ ರಾಧಾಕೃಷ್ಣ ಗೌಡ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ವಿಠ್ಠಲ್ ಎಂ. ಸ್ವಾಗತಿಸಿ , ಮಾಯ ಮಹೇಶ್ವರ ಭಜನಾ ಮಂಡಳಿಯು ಹಿಂದಿನಿಂದಲೂ ಮಾಯ ಶಾಲೆಗೆ ನೀಡುತ್ತಿರುವ ಸಹಕಾರವನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









