ಬೆಳ್ತಂಗಡಿ: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನಡೆದ ಸ್ಪರ್ಧೆಗಳಲ್ಲಿ ಕುಂಭಶ್ರೀ ಶಾಲೆಯ ವಿದ್ಯಾರ್ಥಿಗಳ ಸಾಧನೆ

0

​ಬೆಳ್ತಂಗಡಿ: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಕಾರ್ಯಕ್ರಮವು ಬೆಳ್ತಂಗಡಿಯ ಸಿವಿಸಿ ಸಭಾಭವನದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಈ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ನಿಟ್ಟಡೆ-ವೇಣೂರಿನ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡಿ ಶಾಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ

.​ಸ್ಪರ್ಧೆಯಲ್ಲಿ ಮಿಂಚಿದ ಪ್ರತಿಭೆಗಳು:ಸಮಾರಂಭದಲ್ಲಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಚಿನ್ಮಯಿ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅದೇ ರೀತಿ, ಚಿತ್ರಕಲಾ ಸ್ಪರ್ಧೆಯಲ್ಲಿ ಇದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಸಾನ್ವಿ ಅವರು ದ್ವಿತೀಯ ಸ್ಥಾನವನ್ನು ಪಡೆದು ಸಾಧನೆ ಮೆರೆದಿದ್ದಾರೆ.​

ವಿಜೇತ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಕುಂಭಶ್ರೀ ಶಾಲೆಯ ಹಳೆ ವಿದ್ಯಾರ್ಥಿ ಮಾಸ್ಟರ್ ಪೂಜಿತ್ ಕುಲಾಲ್ ಅವರು ಬಹುಮಾನಗಳನ್ನು ವಿತರಿಸಿ ಪ್ರೋತ್ಸಾಹಿಸಿದರು.​

ವಿದ್ಯಾರ್ಥಿನಿಯರ ಈ ಸಾಧನೆಯನ್ನು ಶಾಲೆಯ ಸಂಸ್ಥಾಪಕರಾದ ಗಿರೀಶ್ ಕೆ. ಎಚ್., ಸಂಚಾಲಕರಾದ ಅಶ್ವಿತ್ ಕುಲಾಲ್, ಶಾಲೆಯ ಮುಖ್ಯೋಪಾಧ್ಯಾಯರು, ಮುಖ್ಯೋಪಾಧ್ಯಾಯಿನಿಯರು ಹಾಗೂ ಸಮಸ್ತ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿನಿಯರು ಭವಿಷ್ಯದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಸಂಸ್ಥೆಯು ಶುಭ ಹಾರೈಸಿದೆ.​

ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣೆ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗೌಡರ (ಒಕ್ಕಲಿಗರ) ಸೇವಾ ಸಂಘ (ರಿ.) ಬೆಳ್ತಂಗಡಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಸಹಕರಿಸಿದ್ದರು.

LEAVE A REPLY

Please enter your comment!
Please enter your name here