ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನೆ

0

ಬೆಳ್ತಂಗಡಿ : 2026- 27 ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಜುಲೈ 6ರಂದು ನಡೆಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉದ್ಘಾಟಕರಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಪ್ರಮಾಣ ವಚನ ಬೋಧಿಸಿ ಮಾತನಾಡಿ ಸಹಪಠ್ಯ ಚಟುವಟಿಕೆಗಳು, ಮಕ್ಕಳಲ್ಲಿ ನಾಯಕತ್ವ ಗುಣ, ಹೊಂದಾಣಿಕೆಯಂತಹ ಗುಣಗಳನ್ನು ಮೈಗೂಡಿಸಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಇದು ಕಲಿಕೆಗೆ ಪ್ರೇರಣೆಯನ್ನು ನೀಡುವುದರೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೂ ಸಹಕಾರಿಯಾಗುವುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ ದಯಾನಂದ ರೈಯವರು ವಹಿಸಿದ್ದರು. ನೂತನವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕರ್ತವ್ಯ ಬೋಧನೆಯನ್ನು ಶಾಲಾಡಳಿತ ಸಮಿತಿಯ ಸದಸ್ಯರಾದ ಶ್ರೀಯುತ ಶಿವಪ್ರಸಾದ್ ರವರು ಬೋಧಿಸಿದರು. ಶಾಲಾ ಶಿಕ್ಷಕಿಯಾದ ಶ್ರೀಮತಿ ಮಮತಾ. ಎಸ್ ರವರು ಅತಿಥಿಗಳನ್ನು ಸ್ವಾಗತಿಸಿದರು. ಶಿಕ್ಷಕಿ ಕುl ಸುಷ್ಮಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸೌಮ್ಯ ರವರು ಧನ್ಯವಾದ ನೀಡಿದರು. ಶಿಕ್ಷಕಿಯರಾದ ಶ್ರೀಮತಿ ಸುಜಾತ ಮತ್ತು ವೈಶಾಲಿಯವರು ಕಾರ್ಯಕ್ರಮಕ್ಕೆ ಸಹಕರಿಸಿ ಯಶಸ್ವಿಗೊಳಿಸಿದರು.

LEAVE A REPLY

Please enter your comment!
Please enter your name here