ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

0

ಬೆಳ್ತಂಗಡಿ: ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಇವರನ್ನು ಬೆನ್ನಿದ ಕಂಡೊಡು ಕೆಸರ್ದ್ ಗೊಬ್ಬು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಖ್ಯಾತ ನಟ ಅರವಿಂದ ಬೋಳಾರ್,ಕೆಎಂಎಫ್ ಉಪಾಧ್ಯಕ್ಷ ಉದಯ ಎಸ್ ಕೋಟ್ಯಾನ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಭಾರತದ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ಉದ್ಯಮಿ ಕಿರಣ್ ಕುಮಾರ್ ಮಂಜಿಲ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ ಸಂಘದ ಕಾರ್ಯದರ್ಶಿ ನಿತೇಶ್ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here