ಬೆಳ್ತಂಗಡಿ: ಥ್ರೋಬಾಲ್ ಕ್ರೀಡೆಯಲ್ಲಿ ಸಾಧನೆಗೈದ ದೈಹಿಕ ಶಿಕ್ಷಣ ಶಿಕ್ಷಕಿಗೆ ಸನ್ಮಾನ​

0

ಬೆಳ್ತಂಗಡಿ: ಜಿಲ್ಲಾ ಮತ್ತು ರಾಜ್ಯ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಅದ್ಭುತ ಸಾಧನೆಗೈದ ಕಾಶೀಪಟ್ಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪದ್ಮಶ್ರೀ ಜೈನ್ ಅವರನ್ನು ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.​

ದಕ್ಷಿಣ ಕನ್ನಡ ಜಿಲ್ಲಾ ಥ್ರೋಬಾಲ್ ತಂಡದ ಪ್ರಮುಖ ಆಟಗಾರ್ತಿಯಾಗಿರುವ ಪದ್ಮಶ್ರೀ ಜೈನ್, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸುವುದರೊಂದಿಗೆ, ರಾಜ್ಯ ಮಟ್ಟದ ಸ್ಪರ್ಧೆಯಲ್ಲೂ ಅದ್ವಿತೀಯ ಸಾಧನೆ ಮೆರೆದು ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ಇವರು ತೋರಿದ ಈ ವಿಶೇಷ ಸಾಧನೆಯನ್ನು ಗುರುತಿಸಿ, ತಾಲೂಕು ಮಟ್ಟದ ಕಾರ್ಯಾಗಾರದಲ್ಲಿ ಶಿಕ್ಷಕರು ಮತ್ತು ಗಣ್ಯರು ಅಭಿನಂದನೆ ಸಲ್ಲಿಸಿದರು.​ಈ ಸಂದರ್ಭದಲ್ಲಿ ಸಹೋದ್ಯೋಗಿ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದು, ಪದ್ಮಶ್ರೀ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here