






ಬೆಳ್ತಂಗಡಿ: ದೈಹಿಕ ಶಿಕ್ಷಣ ಶಿಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟದ ವೇಟ್‌ಲಿಫ್ಟಿಂಗ್ (ಭಾರ ಎತ್ತುವಿಕೆ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಸುಜಾತಾ ಅವರನ್ನು ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಗೌರವಪೂರ್ವಕವಾಗಿ ಅಭಿನಂದಿಸಲಾಯಿತು.
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಜಾತಾ ಅವರು, ತಮ್ಮ ಶ್ರಮ ಮತ್ತು ಕೌಶಲ್ಯದ ಮೂಲಕ ಪ್ರಥಮ ಸ್ಥಾನವನ್ನು ಮುಡಿಗೇರಿಸಿಕೊಂಡಿದ್ದಾರೆ.


ಈ ಸಾಧನೆಯ ಮೂಲಕ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿರುವುದು ತಾಲೂಕಿನ ಶಿಕ್ಷಕ ವೃಂದಕ್ಕೆ ಹೆಮ್ಮೆಯ ವಿಷಯವಾಗಿದೆ. ಕ್ರೀಡಾ ಕ್ಷೇತ್ರದಲ್ಲಿನ ಈ ವಿಶೇಷ ಸಾಧನೆಯನ್ನು ಗುರುತಿಸಿ, ಜು. 7 ರಂದು ನಡೆದ ತಾಲೂಕು ಮಟ್ಟದ ಕಾರ್ಯಾಗಾರದಲ್ಲಿ ಶಿಕ್ಷಕರು ಮತ್ತು ಗಣ್ಯರು ಅವರಿಗೆ ಅಭಿನಂದನೆ ಸಲ್ಲಿಸಿ, ರಾಜ್ಯ ಮಟ್ಟದ ಸ್ಪರ್ಧೆಗೂ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಿವಿಧ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದ









