







ಬೆಳ್ತಂಗಡಿ : ತಾಲೂಕಿನ ಉಜಿರೆ ಗ್ರಾಮ ಪಂಚಾಯಿತಿನಲ್ಲಿ ಜೂ.7 ರಂದು ದಂಪತಿ ಸಬಲೀಕರಣ ಕಾರ್ಯಕ್ರಮ ನಡೆಯಿತು .
ವಿಶ್ವಜನ ಸಂಖ್ಯಾ ದಿನಾಚರಣೆಯ ಅಂಗವಾಗಿ ಉಜಿರೆ ವ್ಯಾಪ್ತಿಯ ಹಲವು ಅರ್ಹ ಫಲಾನುಭವಗಳನ್ನು ಕರೆಸಿ ಕುಟುಂಬ ಕಲ್ಯಾಣ ಕಾರ್ಯಕ್ರಮದ ಅಗತ್ಯತೆಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ವಹಿಸಿದ್ದರು.


ಸಂಪನ್ಮೂಲಕರಾಗಿ ಡಾ. ತುಷಾರ್, ಜ್ಯೋತಿ ಉಳಿಪಾಡಿ ರವರು ವಿಶ್ವ ಜನಸಂಖ್ಯಾ ದಿನಾಚರಣೆಯ ಬಗ್ಗೆ ಹಿತನುಡಿಯನ್ನು ತಿಳಿಸಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಪುಷ್ಪ ಫಲಾನುಭವಿಗಳಿಗೆ ಬಹುಮಾನವನ್ನು ಹಂಚಿದರು. ಬಿಪಿಎಂ ಅಜಯ್ ಕಾರ್ಯಕ್ರಮ ನಿರೂಪಿಸಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಇವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉಜಿರೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಎಲ್ಲಾ ಆಶಾ ಕಾರ್ಯಕರ್ತೆಯರು ಫಲಾನುಭವಿಗಳನ್ನು ಕರೆತಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಕಾರ್ಯಕ್ರಮದಿಂದ ಉತ್ತಮ ಆರೋಗ್ಯವಂತ ಸಮಾಜ ಸೃಷ್ಟಿ ಮಾಡುವುದು ಆಗಿದೆ. ಮುಂದಿನ ದಿನಗಳಲ್ಲಿ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು









