







ಬೆಳ್ತಂಗಡಿ: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ 2026-27ನೇ ಸಾಲಿನ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜುಲೈ 8ರಂದು ಸಂಘದ ಕಾರ್ಯಾಲಯದಲ್ಲಿ ಶಾಂತಿಯುತವಾಗಿ ಜರುಗಿತು.


ಸಂಘದ ಗೌರವ ಮಾರ್ಗದರ್ಶಕರಾಗಿ ಶಶಿಧರ್ ಶೆಟ್ಟಿ ನವಶಕ್ತಿ ಅವರನ್ನು ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಪ್ರಕಾಶ್ ಶೆಟ್ಟಿ ನೊಚ್ಚ ಅವರು ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ರಾಜು ಶೆಟ್ಟಿ ಮತ್ತು ಉಮೇಶ್ ಶೆಟ್ಟಿ ಉಜಿರೆ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ, ಕೋಶಾಧಿಕಾರಿಯಾಗಿ ವಸಂತ್ ಶೆಟ್ಟಿ ಶ್ರದ್ವಾ ಹಾಗೂ ಜೊತೆ ಕಾರ್ಯದರ್ಶಿಯಾಗಿ ರವಿ ಶೆಟ್ಟಿ ಸುಕ್ಕೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ . ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಸಮುದಾಯದ ಮುಖಂಡರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.









