ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಕಡಮಗುಂಡಿ (ದಿಡುಪೆ) ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ

0

ಬೆಳ್ತಂಗಡಿ : ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಹವಾಮಾನ ಇಲಾಖೆಯು ಭಾರಿ ಮಳೆಯ ಮುನ್ಸೂಚನೆ (Red Alert) ನೀಡಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರವಾಸಿಗರು ಮತ್ತು ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ.​​

ಕಡಮಗುಂಡಿ (ದಿಡುಪೆ) ಜಲಪಾತಕ್ಕೆ ನಿರ್ಬಂಧ: ಭಾರಿ ಮಳೆಯಿಂದಾಗಿ ಉಂಟಾಗಬಹುದಾದ ಭೂಕುಸಿತದ ಭೀತಿ ಮತ್ತು ಜಲಪಾತದ ಪ್ರದೇಶದಲ್ಲಿನ ಅಪಾಯಕಾರಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕಡಮಗುಂಡಿ (ದಿಡುಪೆ) ಜಲಪಾತಕ್ಕೆ ಪ್ರವಾಸಿಗರ ಭೇಟಿಯನ್ನು ಮುಂದಿನ ಆದೇಶದವರೆಗೆ ನಿಷೇಧಿಸಲಾಗಿದೆ.​

ಜು. 9 ಹಾಗೂ 10 ನೇತ್ರಾವತಿ ಚಾರಣ ಬಂದ್ : ಮಳೆಯ ಅಬ್ಬರ ಹೆಚ್ಚಾಗಿರುವುದರಿಂದ ಜು. 9 ಹಾಗೂ 10 ರಂದು ನೇತ್ರಾವತಿ ಚಾರಣಕ್ಕೂ ಹೋಗದಂತೆ ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.​

LEAVE A REPLY

Please enter your comment!
Please enter your name here