ಅಳದಂಗಡಿ ಸರಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

0

ಬೆಳ್ತಂಗಡಿ: ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಸಂಯೋಜನೆ ಒಳಗೊಂಡ ತರಗತಿ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.

ಕಾಲೇಜಿನಲ್ಲಿ ಈಗಾಗಲೇ ಕಲಾ ವಿಭಾಗ, ವಾಣಿಜ್ಯ ವಿಭಾಗ (ಇತಿಹಾಸ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಹಾಗೂ ಲೆಕ್ಕಶಾಸ್ತ್ರ) ಮತ್ತು ವಿಜ್ಞಾನ (ಭೌತವಿಜ್ಞಾನ, ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಜೀವ ಶಾವಿಜ್ಞಾನ) ವಿಭಾಗಗಳು ಇದ್ದು, ಕಾಲೇಜಿನ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಕ್ಕೆ ಕಂಪ್ಯೂಟರ್ ಸೈನ್ಸ್ ವಿಷಯವೂ ಒಳಗೊಂಡ ವಾಣಿಜ್ಯ ವಿಭಾಗದಲ್ಲಿ ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಹಾಗೂ ಕಂಪ್ಯೂಟರ್ ಸೈನ್ಸ್, ವಿಜ್ಞಾನ ವಿಭಾಗದಲ್ಲಿ ಭೌತವಿಜ್ಞಾನ, ರಸಾಯನ ವಿಜ್ಞಾನ, ಗಣಿತವಿಜ್ಞಾನ ಹಾಗೂ ಕಂಪ್ಯೂಟರ್ ಸೈನ್ಸ್ ವಿಷಯಗಳ ಸಂಯೋಜನೆಗಳಿಗೆ ಅನುಮತಿ ನೀಡುವಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದರು.

2026-27ನೇ ಸಾಲಿಗೆ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ವಿಷಯವನ್ನು ಒಳಗೊಂಡ ಸಂಯೋಜನೆ ಆರಂಭಿಸಲು ಅನುಮತಿ ನೀಡಿದೆ.

LEAVE A REPLY

Please enter your comment!
Please enter your name here