







ಪದ್ಮುಂಜ: ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಸುನಿತಾ ಅವರು ತಮ್ಮ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಿಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸಾಮಾನ್ಯವಾಗಿ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸುವ ಇಂದಿನ ದಿನಗಳಲ್ಲಿ, ಸುನಿತಾ ಅವರು ಎಂಡೋಸಲ್ಫಾನ್ ಸಂತ್ರಸ್ತರೊಂದಿಗೆ ಕಾಲ ಕಳೆಯುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ.


ಅವರು ಪದ್ಮುಂಜದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ಸಂತ್ರಸ್ತರೊಂದಿಗೆ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡರು.ಈ ವಿಶೇಷ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಿಹಿತಿಂಡಿಗಳನ್ನು ಹಂಚಿ, ಅವರೊಂದಿಗೆ ಸಮಯ ಕಳೆಯುವ ಮೂಲಕ ಆತ್ಮೀಯತೆಯನ್ನು ವ್ಯಕ್ತಪಡಿಸಿದರು.
ಸುನಿತಾ ಅವರ ಈ ಸರಳ ಮತ್ತು ಹೃದಯಸ್ಪರ್ಶಿ ನಡೆ ನೆರೆದಿದ್ದವರಲ್ಲಿ ಸಂತಸ ಮೂಡಿಸಿತು.ಈ ಕಾರ್ಯಕ್ರಮದಲ್ಲಿ ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳು ಹಾಗೂ ಸಂತ್ರಸ್ತರು ಉಪಸ್ಥಿತರಿದ್ದು, ಸುನಿತಾ ಅವರಿಗೆ ಶುಭ ಹಾರೈಸಿದರು.









