







ಮೈಸೂರು: ಕನ್ನಡ ಚಿತ್ರರಂಗದ ಹೆಮ್ಮೆಯ ಗಾಯಕಿ, ದಕ್ಷಿಣ ಭಾರತದ ಸಂಗೀತ ಲೋಕದ ಕೋಗಿಲೆ ಎಂದೇ ಖ್ಯಾತರಾಗಿರುವ ಎಸ್. ಜಾನಕಿ(88 ವ )ಅವರು ನಿಧನರಾಗಿದ್ದಾರೆ.


ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಯು ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ತಮ್ಮ ಮಧುರ ಕಂಠದಿಂದ ದಶಕಗಳ ಕಾಲ ಸಂಗೀತ ಪ್ರಿಯರನ್ನು ಮಂತ್ರಮುಗ್ಧರನ್ನಾಗಿಸಿದ್ದ ಎಸ್. ಜಾನಕಿ ಅವರು, ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದರು.









