







ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಸಾಲಿನ ವಿವಿಧ ಸಂಘಗಳಾದ ಕೃಷಿ ಸಂಘ, ವಿಜ್ಞಾನ ಸಂಘ, ಸಾಂಸ್ಕೃತಿಕ ಸಂಘ ಹಾಗೂ ಕ್ರೀಡಾ ಸಂಘಗಳ ಉದ್ಘಾಟನಾ ಕಾರ್ಯಕ್ರಮವನ್ನು ಜು.14ರಂದು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು.
ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ಮುಖ್ಯ ಅತಿಥಿಗಳು ಹಾಗೂ ಗಣ್ಯರನ್ನು ಸ್ವಾಗತಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂತೋಷ್ ಆಳ್ವಿಕ ಸಲ್ಲನಾ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಸಂಘಗಳ ಮಹತ್ವ, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಸಂಘಗಳ ಪಾತ್ರ ಹಾಗೂ ಪಠ್ಯೇತರ ಚಟುವಟಿಕೆಗಳ ಅಗತ್ಯತೆಯ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಮ್ಮ ಶಾಲೆಯ ಯಕ್ಷಗಾನ ತರಬೇತುದಾರರಾದ ಶ್ರೀಯುತ ಲಕ್ಷ್ಮಣ್ ಗೌಡ ಇವರು ಉಪಸ್ಥಿತರಿದ್ದು, ಕಲೆ ಎಲೆದು ವ್ಯಕ್ತಿತ್ವವನ್ನು ರೂಪಿಸುವ ಶಕ್ತಿಯಾಗಿರಬೇಕು ಎಂದು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಎಸ್. ಡಿ. ಎಂ ಕಲಾಕೇಂದ್ರದ ನೃತ್ಯ ತರಬೇತುದಾರರಾದ ಚೈತ್ರ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಅಬೂಬಕರ್ ಮತ್ತು ಉಪಾಧ್ಯಕ್ಷ ವೇದಾವತಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಶಾಲಾ ಮುಖ್ಯೋಪಾಧ್ಯಾಯ ಬಾಲಕೃಷ್ಣ ನಾಯ್ಕ ನಿರ್ವಹಿಸಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು, ಶಟಲ್ ಬ್ಯಾಡ್ಮಿಂಟನ್, ಗಿಡನೆಡುವುದು ಹಾಗೂ ವಿಜ್ಞಾನ ಪ್ರದರ್ಶನಗಳ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.
ಶಾಲೆಯ ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳು ಸಂಘಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಕಾರ್ಯಕ್ರಮವನ್ನು ಸುಜಾತಾ . ಬಿ ನಿರೂಪಿಸಿದರು. ಹೊಸಪೂರವರು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಪ್ರಾಸಾವಿಕ ನುಡಿಗಳನ್ನು ಆಡಿದರು . ಪುಷ್ಪಾವತಿ ಧನ್ಯವಾದವನ್ನು ನೀಡಿದರು









