ವಿದ್ಯಾರ್ಥಿಗಳು ಸನಾತನ ಸಂಸ್ಕೃತಿ ಮತ್ತು ಕೌಟುಂಬಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು: ಡಾ. ಪ್ರಭಾಕರ್ ಭಟ್ ಕಲ್ಲಡ್ಕ

0

​ಮುಂಡಾಜೆ: “ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು ಕೇವಲ ಶಿಕ್ಷಣವಷ್ಟೇ ಅಲ್ಲದೆ, ನಮ್ಮ ಸನಾತನ ಪರಂಪರೆ, ಸಂಸ್ಕೃತಿ ಮತ್ತು ಭಾರತದ ಭವ್ಯ ವೈಭವವನ್ನು ಸಾರುವ ಶಿಕ್ಷಣದೊಂದಿಗೆ, ಗುರು-ಹಿರಿಯರನ್ನು ಗೌರವಿಸುವ ಗುಣ ಹಾಗೂ ಕೌಟುಂಬಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ” ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರಿನ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅಭಿಪ್ರಾಯಪಟ್ಟರು.

​ಅವರು ಜುಲೈ 16, ರಂದು ಮುಂಡಾಜೆಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.​

ಕಾರ್ಯಕ್ರಮದಲ್ಲಿ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯ ಚಂದ್ರ, ಕಾಲೇಜಿನ ಸಂಚಾಲಕ ನಾರಾಯಣ ಫಡ್ಕೆ ಮತ್ತು ಪ್ರಾಂಶುಪಾಲೆ ಗೀತಾ ಅವರು ಉಪಸ್ಥಿತರಿದ್ದರು.​

ಸರಸ್ವತಿ ವಂದನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇಂಗ್ಲಿಷ್ ಉಪನ್ಯಾಸಕ ಪುರುಷೋತ್ತಮ ಶೆಟ್ಟಿ ಸಂಸ್ಥೆಯ ಹಾಗೂ ಶಿಕ್ಷಣ ಇಲಾಖೆಯ ನಿಯಮಾವಳಿಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.

ಮನಶಾಸ್ತ್ರ ಉಪನ್ಯಾಸಕಿ ನಮಿತಾ ಕೆ. ಆರ್. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.​ವಿದ್ಯಾರ್ಥಿನಿ ಜನೀಕ್ಷಾ ಸ್ವಾಗತಿಸಿದರು, ದೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ವಿದ್ಯಾರ್ಥಿ ಭರತ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here