






ಬೆಳ್ತಂಗಡಿ: ಡಿಡುಪೆ-ಸಂಸೆ ಅರಣ್ಯ ಮಾರ್ಗದಲ್ಲಿ ಅನಧಿಕೃತವಾಗಿ ಸಂಚರಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಡುತ್ತಿರುವವರ ವಿರುದ್ಧ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ.


ಈ ಮಾರ್ಗವು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಿಷೇಧಿತ ಪ್ರದೇಶವಾಗಿದ್ದು, ಇಲ್ಲಿ ಯಾವುದೇ ರೀತಿಯ ಬೈಕ್ ರ್ಯಾಲಿ ಅಥವಾ ಜೀಪ್ ರ್ಯಾಲಿ ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಆದರೂ, ಕೆಲವರು ನಿಯಮ ಉಲ್ಲಂಘಿಸಿ ಈ ಪ್ರದೇಶದಲ್ಲಿ ವಾಹನ ಚಲಾಯಿಸಿ, ಆ ದೃಶ್ಯಗಳನ್ನು ಯೂಟ್ಯೂಬ್ (YouTube) ಮತ್ತು ಇನ್ಸ್ಟಾಗ್ರಾಮ್ (Instagram) ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ.
ಈ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ರೋಡಿನಲ್ಲಿ ಗೇಟ್ ಮತ್ತು ಪ್ರಕಟಣೆ ಇದ್ದರು ತೆರಾಳುತ್ತಾರೆ “ಈವರೆಗೆ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ವಿಡಿಯೋಗಳನ್ನು ಅಪ್ಲೋಡ್ ಮಾಡಿದವರನ್ನು ಪತ್ತೆ ಹಚ್ಚಿ, ಅವರಿಂದ ದಂಡ ವಸೂಲಿ ಮಾಡಲಾಗಿದೆ ಮತ್ತು ಕಾನೂನು ಕ್ರಮ ಜರುಗಿಸಲಾಗಿದೆ,” ಎಂದು ಆರ್ ಎಫ್ ಓ ಶರ್ಮಿಷ್ಟ ತಿಳಿಸಿದ್ದಾರೆ.









