






ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ಈ ಹಿಂದೆ ನಡೆಸಿದ ತನಿಖೆಯ ವೈಫಲ್ಯಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ದ್ವಿಸದಸ್ಯ ಪೀಠದ ವಿಚಾರಣೆ ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಮರು ತನಿಖೆ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ಭಾರಿ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ನ್ಯಾಯಪೀಠವು ಅಂತಿಮ ತೀರ್ಪನ್ನು ಕಾಯ್ದಿರಿಸಿದೆ.ಸಿಬಿಐಗೆ ಸುಪ್ರೀಂ ಚಾಟಿ ವಿಚಾರಣೆ ವೇಳೆ ನ್ಯಾಯಪೀಠವು ಸಿಬಿಐ ತನಿಖೆಯನ್ನು ತೀವ್ರವಾಗಿ ಪ್ರಶ್ನಿಸಿತು. CID ವರದಿ ಟ್ರಾನ್ಸ್ಲೇಟ್ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ” ಎಂದು ನ್ಯಾಯಪೀಠ ಪ್ರಶ್ನಿಸಿದೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆಯಲ್ಲಿ ಗಂಭೀರ ಲೋಪಗಳಿವೆ ಎಂಬುದನ್ನು ಪೀಠ ಉಲ್ಲೇಖಿಸಿದೆ.


ಮರು ತನಿಖೆಗೆ ಸಮ್ಮತಿ: ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಆದರೆ ತನಿಖೆಯನ್ನು ಯಾವ ಏಜೆನ್ಸಿಯಿಂದ, ಯಾವ ಸ್ವರೂಪದಲ್ಲಿ ನಡೆಸಬೇಕು ಎನ್ನುವುದರ ಕುರಿತು ಅಂತಿಮ ಆದೇಶವನ್ನು ಕಾಯ್ದಿರಿಸಿದೆ.
ಮುಂದಿನ ಆದೇಶದಲ್ಲಿ ಈ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಸ್ತೃತವಾದ ನಿರ್ದೇಶನಗಳನ್ನು ನೀಡಲಿದೆ.2012 ರಲ್ಲಿ ನಡೆದ ಈ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಈಗ ಸುಮಾರು 14 ವರ್ಷಗಳ ಬಳಿಕ ಪ್ರಕರಣದ ಮರು ತನಿಖೆಗೆ ಸುಪ್ರೀಂ ಮುಂದಾಗಿರುವುದು ಮಹತ್ವ ಪಡೆದುಕೊಂಡಿದೆ.









