







ಉಜಿರೆ : ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಜು.25ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಜರಗಿತು. ಆರ್ಥಿಕ ವರ್ಷದಲ್ಲಿ ಒಟ್ಟು ರೂ. 435 ಕೋಟಿ ವ್ಯವಹಾರ ನಡೆಸಿ ನಿವ್ವಳ ರೂಪಾಯಿ 55,40,465/ ಲಾಭ ಗಳಿಸಿ ಸದಸ್ಯರಿಗೆ ಶೇಕಡಾ 12 ಡಿವಿಡೆಂಟ್ ಘೋಷಣೆ ಮಾಡಲಾಯಿತು.


ಸಂಘದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸರಸ್ವತಿ ಸಿ . ರೈ ವರದಿ ವಾಚಿಸಿದರು. ಉಪಾಧ್ಯಕ್ಷ ಸದಾಶಿವ ಯಾನೆ ಶ್ರೀಧರ ಪೂಜಾರಿ ಸ್ವಾಗತಿಸಿ, ಸಿಬ್ಬಂದಿ ಮೋಹನ್ ಗೌಡ ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭದಲ್ಲಿ ಗೌರವ ಡಾಕ್ಟರೇಟ್ ಪಡೆದ ಡಾ. ಸಾವಿತ್ರಿ ರೈ ಇವರನ್ನು ಗೌರವಿಸಲಾಯಿತು.

ನಿರ್ದೇಶಕರುಗಳಾದ ಅರುಣ್ ಕುಮಾರ್, ಗುರುರಾಜ್ ಗೌಡ ಅಂತರ, ರಜತ್ ಗೌಡ, ಅರವಿಂದ ಕಾರಂತ್, ಅನಿಲ್ ಪ್ರಕಾಶ್ ಡಿಸೋಜ, ಪುಷ್ಪಾವತಿ ಆರ್. ಶೆಟ್ಟಿ, ವಾರಿಜ ಎಸ್. ಗೌಡ, ಅಣ್ಣು ನಾಯ್ಕ, ಸಾಧು ಎಂ., ವಲಯ ಮೇಲ್ವಿಚಾರಕ ಸುದರ್ಶನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.









