ಸೋಮಂತಡ್ಕದಲ್ಲಿ ಎಕ್ಸ್‌ಪ್ರೆಸ್ ಬಸ್ ನಿಲುಗಡೆಗೆ ಆಗ್ರಹ2014ರ ಆದೇಶವಿದ್ದರೂ ಪಾಲನೆಯಾಗದಕ್ಕೆ ವಿದ್ಯಾರ್ಥಿಗಳ ಆಕ್ರೋಶ – ಮನವಿ ಸಲ್ಲಿಕೆ

0

ಬೆಳ್ತಂಗಡಿ:ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ KSRTC ಎಕ್ಸ್‌ಪ್ರೆಸ್ ಬಸ್‌ಗಳಿಗೆ ಅಧಿಕೃತ ಆದೇಶವಿದ್ದರೂ ನಿಲುಗಡೆ ನೀಡದಿರುವುದನ್ನು ಖಂಡಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಜು. 28 ರಂದು ಸಂಜೆ ಮನವಿ ಸಲ್ಲಿಸಿದರು.

10 ವರ್ಷದಿಂದಲೂ ಜಾರಿಯಾಗದ ಆದೇಶಸೋಮಂತಡ್ಕದಲ್ಲಿ ಎಕ್ಸ್‌ಪ್ರೆಸ್ ಬಸ್‌ಗಳಿಗೆ ನಿಲುಗಡೆ ಕಲ್ಪಿಸುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮವು 2014ರಲ್ಲೇ ಆದೇಶ ಹೊರಡಿಸಿತ್ತು ಆದರೆ ಧರ್ಮಸ್ಥಳ ಡಿಪೋಗೆ ಸೇರಿದ ಕೆಲವು ಬಸ್‌ಗಳನ್ನು ಹೊರತುಪಡಿಸಿ ಇತರ ಡಿಪೋಗಳ ಎಕ್ಸ್‌ಪ್ರೆಸ್ ಬಸ್‌ಗಳು ಈ ಆದೇಶವನ್ನು ಗಾಳಿಗೆ ತೂರಿ ಓಡುತ್ತಿವೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪ.ಸಾವಿರಾರು ವಿದ್ಯಾರ್ಥಿಗಳಿಗೆ ತೊಂದರೆ ಸೋಮಂತಡ್ಕವು ಬೆಳ್ತಂಗಡಿ ತಾಲೂಕಿನ ಪ್ರಮುಖ ಶೈಕ್ಷಣಿಕ ಕೇಂದ್ರವಾಗಿದೆ.

ಇಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲೆಗಳು, ಸರ್ಕಾರಿ ವಿದ್ಯಾರ್ಥಿ ನಿಲಯ ಹಾಗೂ ಪ್ರತಿಷ್ಠಿತ ನವೋದಯ ವಿದ್ಯಾಲಯ ಕಾರ್ಯನಿರ್ವಹಿಸುತ್ತಿವೆ.ಪ್ರತಿದಿನ ತಾಲೂಕಿನ ವಿವಿಧ ಗ್ರಾಮಗಳಿಂದ ನೂರಾರು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿ ಇಲ್ಲಿಗೆ ಆಗಮಿಸುತ್ತಾರೆ. ಜೊತೆಗೆ ಉಜಿರೆ, ಬೆಳ್ತಂಗಡಿ, ಧರ್ಮಸ್ಥಳ, ಮಂಗಳೂರು ಸೇರಿದಂತೆ ವಿವಿಧೆಡೆಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆಯೂ ಗಣನೀಯವಾಗಿದೆ. ತುಂಬಿ ತುಳುಕುವ ಗ್ರಾಮಾಂತರ ಬಸ್‌ಗಳು ಈ ಮಾರ್ಗದಲ್ಲಿ KSRTCಯ ಗ್ರಾಮಾಂತರ ಬಸ್‌ಗಳು ಓಡಾಟ ನಡೆಸುತ್ತಿದ್ದರೂ ಅವು ಬೆಳಗ್ಗೆ ಮತ್ತು ಸಂಜೆ ವೇಳೆ ಸಂಪೂರ್ಣ ತುಂಬಿ ತುಳುಕುತ್ತಿವೆ.

ಇದರಿಂದ ವಿದ್ಯಾರ್ಥಿಗಳು ಬಸ್‌ಗೆ ಏರಲು ಆಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೆಲವೊಮ್ಮೆ 2-3 ಬಸ್‌ಗಳು ತುಂಬಿ ಹೋದ ಬಳಿಕವೂ ಸ್ಥಾನ ಸಿಗದೇ ವಿದ್ಯಾರ್ಥಿಗಳು ತರಗತಿಗಳಿಗೆ ತಡವಾಗಿ ತಲುಪುವ ಅನಿವಾರ್ಯತೆ ಎದುರಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.

ಶಾಶ್ವತ ಪರಿಹಾರ ಕೊಡಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಮಾತನಾಡಿ, _”ಪ್ರತಿ ವರ್ಷ ಇದೇ ಸಮಸ್ಯೆ ಮರುಕಳಿಸುತ್ತಿದೆ. ಪ್ರತಿಭಟನೆ ನಡೆದಾಗ ಮಾತ್ರ ಅಧಿಕಾರಿಗಳು ಸ್ಥಳಕ್ಕೆ ಬಂದು ಭರವಸೆ ನೀಡುತ್ತಾರೆ. ಕೆಲವು ದಿನಗಳ ಕಾಲ ಬಸ್‌ಗಳು ನಿಲ್ಲುತ್ತವೆ. ನಂತರ ಮತ್ತೆ ಹಳೆಯ ಸ್ಥಿತಿಗೆ ಮರಳುತ್ತದೆ. ಆದೇಶವಿದ್ದರೂ ಅದನ್ನು ಶಾಶ್ವತವಾಗಿ ಜಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಸಂಪೂರ್ಣ ವಿಫಲರಾಗಿದ್ದಾರೆ”_ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಕ್ಸ್‌ಪ್ರೆಸ್ ಬಸ್‌ಗಳಿಗೆ ಆದೇಶದಂತೆ ನಿಲುಗಡೆ ನೀಡಿದರೆ ವಿದ್ಯಾರ್ಥಿಗಳ ಜತೆಗೆ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ದೂರದ ಊರುಗಳಿಗೆ ಹೋಗುವ ಪ್ರಯಾಣಿಕರಿಗೂ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು2014ರ KSRTC ಆದೇಶವನ್ನು ತಕ್ಷಣವೇ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕುಎಲ್ಲಾ ಡಿಪೋಗಳ ಎಕ್ಸ್‌ಪ್ರೆಸ್ ಬಸ್‌ಗಳಿಗೆ ಸೋಮಂತಡ್ಕದಲ್ಲಿ ಕಡ್ಡಾಯ ನಿಲುಗಡೆ ನೀಡಬೇಕು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ಲಿಖಿತ ಭರವಸೆ ನೀಡಬೇಕು.

LEAVE A REPLY

Please enter your comment!
Please enter your name here