ವಾಣಿ ಆಂಗ್ಲ ಮಾಧ್ಯಮ ಶಾಲೆಯ 2026-27 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ ಕಾಮತ್ ಆಯ್ಕೆ

0

ಬೆಳ್ತಂಗಡಿ : 2026-27ನೇ ಜು. 25 ರಂದು ಶೈಕ್ಷಣಿಕ ವರ್ಷದ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ರೇಷ್ಮೆ ರೋಡ್ ಹಾಗೂ ಉಪಾಧ್ಯಕ್ಷರಾಗಿ ರಾಧಿಕ ಕೆ ಕಾಮತ್ ಗುರುವಾಯನಕೆರೆ ಇವರನ್ನು ಆಯ್ಕೆಮಾಡಲಾಯಿತು.

ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ಕುಶಾಲಪ್ಪ ಗೌಡ ಪೂವಾಜೆ ರವರು ಅಧ್ಯಕ್ಷತೆ ವಹಿಸಿದ್ದರು. ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ, ವಕೀಲರು ಬೆಳ್ತಂಗಡಿ, ವಾಣಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2025-26ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ.ಎ ಇವರು ಉಪಸ್ಥಿತರಿದ್ದರು.

ಆಯ್ಕೆ ಪ್ರಕ್ರಿಯೆಯನ್ನು ವಾಣಿ ಪ್ರೌಢ ಶಾಲಾ ಶಿಕ್ಷಕಿ ಮೊಹನಾಂಗಿ, ಹೆಚ್ ನಿರ್ವಹಿಸಿದರು ಮತ್ತು ಶಿಕ್ಷಕಿ ಗೀತಾ ಮತ್ತು ಸುದೀಪ್.ಡಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here