ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮಹತ್ವವಾದದ್ದು“ಹೆಚ್ ಎಂ ನಾಗರಾಜ ರಾವ್ ಕಲ್ಕಟ್ಟೆ”

0

ಬೆಳ್ತಂಗಡಿ 🙁 ಜು.25) ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹೆಚ್ ಎಂ ನಾಗರಾಜ ರಾವ್ ಕಲ್ಕಟ್ಟೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಮತ್ತು ಶಿಕ್ಷಕರ ಸಹಕಾರ ಅತ್ಯಂತ ಅವಶ್ಯಕವೆಂದು ತಿಳಿಸಿದರು.

ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ನೈತಿಕ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸುವ ಜವಾಬ್ದಾರಿ ಪೋಷಕರಿಗೂ ಶಿಕ್ಷಕರಿಗೂ ಸಮಾನವಾಗಿದೆ ಎಂದರು.

ಶಾಲೆಯ ಎಲ್ಲ ಶೈಕ್ಷಣಿಕ ಹಾಗೂ ಸಹಪಠ್ಯ ಚಟುವಟಿಕೆಗಳಿಗೆ ಪೋಷಕರು ಸಕ್ರಿಯವಾಗಿ ಸಹಕರಿಸುವಂತೆ ಕರೆ ನೀಡಿದರು. ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಶಾಲೆ ಮತ್ತು ಪೋಷಕರು ಪರಸ್ಪರ ವಿಶ್ವಾಸ ಹಾಗೂ ಸಹಕಾರದಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿಪ್ರಾಯಪಟ್ಟರು.

ವೇದಿಕೆಯಲ್ಲಿ ವಾಣಿ ವಿದ್ಯಾಸಂಸ್ಥೆಯ ಅಧ್ಯಕ್ಷ ಪಿ. ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಿ ಶಾಲೆಯ ಶೈಕ್ಷಣಿಕ ಪ್ರಗತಿಗೆ ಪೋಷಕರ ಸಹಕಾರ ಅತ್ಯಂತ ಅಗತ್ಯ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪೋಷಕರು ಕೈಜೋಡಿಸಿ ಕಾರ್ಯನಿರ್ವಹಿಸುವಂತೆ ಅವರು ಕರೆ ನೀಡಿದರು.

ಅತಿಥಿಗಳಾಗಿ ವಾಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಗಣೇಶ್ ಗೌಡ ನೋಟರಿ, ವಕೀಲರು ಬೆಳ್ತಂಗಡಿ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, 2025-26ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೇಖರ್ ಶೆಟ್ಟಿ ಇವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ವಾಣಿ ವಿದ್ಯಾಸಂಸ್ಥೆಯ ಪ್ರೌಢ ಶಾಲಾ ಮುಖ್ಯೋಪಾದ್ಯಾಯ ಲಕ್ಷ್ಮೀನಾರಾಯಣ ಕೆ ಇವರು ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಕಳೆದ ಶೈಕ್ಷಣಿಕ ವರ್ಷದಲ್ಲಿ ವಾಣಿ ವಿದ್ಯಾ ಸಂಸ್ಥೆಯ ಶೈಕ್ಷಣಿಕ ಹಾಗೂ ಶೈಕ್ಷಣಿಕೇತರ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿ, ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು.

ಶಿಕ್ಷಕಿ ಮೊಹನಾಂಗಿ ಶಿಕ್ಷಕ-ರಕ್ಷಕ ಸಂಘದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ವಂದಿಸಿದರು ಹಾಗೂ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಗೀತಾ ಮತ್ತು ಸುದೀಪ್ ಡಿ ನಿರೂಪಿಸಿದರು ಮತ್ತು ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here