






ಪೆರ್ಲ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪೆರ್ಲದ ವಿದ್ಯಾರ್ಥಿಗಳಿಗೆ ಉಚಿತವಾಗಿ ಛತ್ರಿಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ಹರಿದಾಸ್ ಎಸ್. ಎಂ., ಸದಸ್ಯರಾದ ಪ್ರಭಾಕರಮಯ್ಯ, ಸುಕನ್ಯ, ಮನೋಹರ್ ಹಾಗೂ ಸುಜಿತ್ ಉಪಸ್ಥಿತರಿದ್ದರು.


ಇದೇ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಮಾಜಿ ಎಸ್ಡಿಎಂಸಿ ಅಧ್ಯಕ್ಷ ದಿವಾಕರ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕ ಮಂಜುನಾಥ ಎಂ.ಎಸ್., ಶಿಕ್ಷಕಿಯರಾದ ಕುಸುಮ, ಶಶಿಕಲಾ ಹಾಗೂ ಆಶಿತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿದ್ಯಾರ್ಥಿಗಳಿಗೆ ಮಳೆಗಾಲದ ಅಗತ್ಯವನ್ನು ಮನಗಂಡು ಉಚಿತವಾಗಿ ಛತ್ರಿಗಳನ್ನು ವಿತರಿಸಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬೆಳ್ತಂಗಡಿ ತಾಲೂಕು ಘಟಕಕ್ಕೆ ಶಾಲೆಯ ಪರವಾಗಿ ಹಾಗೂ ಎಸ್ಡಿಎಂಸಿ ಸಮಿತಿಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು.









