ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಬೆಳ್ತಂಗಡಿ: ಧರ್ಮಸ್ಥಳ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜು.30ರಂದು ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಸೈಂಟ್ ಮೇರಿಸ್ ಶಾಲೆಯ 14 ಮತ್ತು 17 ರ ವಯೋಮಾನದ ಬಾಲಕರ ವಿಭಾಗವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ರ ವಯೋಮಾನದ ಬಾಲಕರ ವಿಭಾಗದಲ್ಲಿ 8ನೇ ತರಗತಿಯ ಎಂ. ಅತುಲ್ ಪ್ರಭು ಹಾಗೂ 14 ರ ವಯೋಮಾನದ ಬಾಲಕರ ವಿಭಾಗದಲ್ಲಿ 7 ನೇ ತರಗತಿಯ ಭವಿಷ್ ಉತ್ತಮ ಆಟಗಾರರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ 14 ರ ವಯೋಮಾನದ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

LEAVE A REPLY

Please enter your comment!
Please enter your name here