








ಮಡಂತ್ಯಾರು: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು.30ರಂದು ಸೇಕ್ರೆಡ್ ಹಾರ್ಟ್ ಕಾಲೇಜಿನ ಒಳ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯರಾದ ಸಾರಾ ಫೆರ್ನಾಂಡಿಸ್, ಲಕಿತಶ್ರೀ ಮತ್ತು ಪ್ರಾಪ್ತ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೂ ಬಾಲಕರ ವಿಭಾಗದಲ್ಲಿ ೬ನೇ ತರಗತಿಯ ವಿದ್ಯಾರ್ಥಿಗಳಾದ ಜೆರಾನ್ ಡಿಕುನ್ಹಾ, ಆತ್ಮಿಕ್ ಜೆ. ಮತ್ತು ಫ್ಲಾಯಿಡ್ ಪಿರೇರಾರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೆರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.









