ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್:ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ

0

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ.

ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡದಲ್ಲಿ ಆದ್ಯಾ ರೈ, ದೃಶಾ ಮರಿಯಾ ಹಾಗೂ ಶ್ರಾವಣಿ ಅವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇದೇ ಸ್ಪರ್ಧೆಯಲ್ಲಿ ಪ್ರೌಢಶಾಲಾ ವಿಭಾಗದ ಆದ್ಯಾ ರೈ ಅವರು ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಯನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಅವರು ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದು, ಶಾಲೆಯ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಅವರು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here