






ಮಡಂತ್ಯಾರು: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು.31ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಒಳ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು.


ಈ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯರಾದ ಅನ್ಯ ಪಿ ಜೈನ್, ಆದ್ಯ ಜೆ, ನಿಶೆಲ್ ರಿಯೋನಾ ಡಿಸೋಜ ಮತ್ತು 10ನೇ ತರಗತಿಯ ಅಲಿಶಾ ಡೇಸರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲಾ ದೈಹಿಕ ಶಿಕ್ಷಕರಾದ ವಲೆರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.









