






ಬೆಳ್ತಂಗಡಿ, : ಬಳಂಜ ಗ್ರಾಮದ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ (ಬದಿನಡೆ) ಆವರಣ ಭಾರಿ ಮಳೆಯಿಂದ ಸಂಪೂರ್ಣ ಜಲಾವೃತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಕ್ಕೆ ಪ್ರವಾಹದ ನೀರು ನುಗ್ಗಿದ್ದು, ದೇವಸ್ಥಾನದ ಆವರಣವೇ ನೀರಿನಿಂದ ಆವರಿಸಲ್ಪಟ್ಟಿದೆ.


ಸ್ಥಳೀಯರು ಇದನ್ನು “ಶ್ರೀ ಕ್ಷೇತ್ರದಲ್ಲಿ ಗಂಗಾ ಸಂಗಮವಾದಂತಿದೆ” ಎಂದು ವರ್ಣಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲಾಡಳಿತವೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.









