







ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಮಂಜುನಾಥ್ ಎಚ್.ಎಸ್. ಅವರ ಆದೇಶದಂತೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಕಾರ್ಯದರ್ಶಿ ಬೆಳ್ತಂಗಡಿಯ ಅಭಿನಂದನ್ ಹರೀಶ್ ಕುಮಾರ್ ಅವರನ್ನು ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.



ಈ ಜವಾಬ್ದಾರಿಯನ್ನು ಸ್ವೀಕರಿಸಿದ ಅಭಿನಂದನ್ ಹರೀಶ್ ಕುಮಾರ್ ಆ. 6 ರಂದು ಕಾರವಾರದ ಪಕ್ಷದ ಕಚೇರಿಯಲ್ಲಿ ಮೊದಲ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಸಿದರು.ಈ ವೇಳೆ, ಮಾತನಾಡಿದ ಅಭಿನಂದನ್ “ಉತ್ತರ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸಬೇಕಿದೆ. ಇದಕ್ಕೆ ಎಲ್ಲರೈ ಕೈ ಜೋಡಿಸಬೇಕು.
ಉತ್ಸಾಹ ಇಮ್ಮಡಿಯಾಗಬೇಕು, ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯನ್ನು ಬಲಗೊಳಿಸಬೇಕೆಂದು ಕರೆ ನೀಡಿದರು.









