







ಉಜಿರೆ: ಪರಿಸರವನ್ನು ಹಸಿರಾಗಿ ಉಳಿಸುವ ಹಾಗೂ ಪರಿಸರ ಮಾತೆಯ ರಕ್ಷಣೆಯ ಕುರಿತು ತಾಯಂದಿರಲ್ಲಿ ಕಾಳಜಿ ಮತ್ತು ಜಾಗೃತಿ ಮೂಡಿಸುವ ಮಹತ್ವಾಪೇಕ್ಷೆಯೊಂದಿಗೆ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳ ಕನಸಿನ ಕೂಸಾದ ‘ಏಕ್ ಪೇಡ್ ಮಾ ಕೇ ನಾಮ್’ (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನದಡಿ ಉಜಿರೆಯ ಎಸ್.ಡಿ.ಎಂ. ವಸತಿ ಪದವಿ ಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಮಾರ್ಗದರ್ಶಕರಾಗಿರುವ ‘ನಿನಾದ’ದ ಶ್ರೀಮತಿ ಸೋನಿಯಾ ಯಶೋವರ್ಮ ಅವರು ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಪರಿಸರ ಕಾಳಜಿಯ ಕುರಿತು ವಿದ್ಯಾರ್ಥಿಗಳಿಗೆ ಮೌಲ್ಯಯುತ ಸಂದೇಶ ನೀಡಿದರು.


ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ವಿದ್ಯಾರ್ಥಿಗಳೊಂದಿಗೆ ಉತ್ಸಾಹದಿಂದ ಪಾಲ್ಗೊಂಡು ಗಿಡ ನೆಟ್ಟು, ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಉಪಯುಕ್ತ ಮಾಹಿತಿ ಹಂಚಿಕೊಂಡರು.ಈ ವಿಶೇಷ ಅಭಿಯಾನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಸಕ್ರಿಯವಾಗಿ ಭಾಗವಹಿಸಿದರು.
ಕಾರ್ಯಕ್ರಮದ ಅಂಗವಾಗಿ ಉತ್ತಮ ತಳಿಯ ಸಸ್ಯಗಳನ್ನು ನೆಟ್ಟು, ಅವುಗಳನ್ನು ಜತನದಿಂದ ಬೆಳೆಸುವ ಜವಾಬ್ದಾರಿಯೊಂದಿಗೆ ಉಪನ್ಯಾಸಕರಿಗೆ ಹಸ್ತಾಂತರಿಸಲಾಯಿತು.
ಇಕೋ ಕ್ಲಬ್ನ ಸಂಯೋಜಕಿ ಹಾಗೂ ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ವಾಣಿ ಎಂ.ಎ. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ









