ಲೀಡರ್ಸ್ ಅವಾರ್ಡ್ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಅಭಿನಂದನೆ

0

ಬೆಳ್ತಂಗಡಿ: ಕರಾವಳಿ ಕರ್ನಾಟಕ ಟಿವಿ ವತಿಯಿಂದ ಇತ್ತೀಚೆಗೆ ನಡೆದ ಲೀಡರ್ಸ್ ಅವಾರ್ಡ್–2025ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದ ಬೆಸ್ಟ್ ಎಂಎಲ್‌ಎ ಅವಾರ್ಡ್ ಪಡೆದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರನ್ನು ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ವತಿಯಿಂದ ಸಮಾಜದ ಪರವಾಗಿ ಪುಷ್ಪಗುಚ್ಛ ನೀಡಿ, ಸಿಹಿ ಹಂಚಿ ಶುಭ ಹಾರೈಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಬಂಟರ ಮಹಿಳಾ ವಿಭಾಗದ ಅಧ್ಯಕ್ಷೆ ವಸುಧಾ ಪಿ ಶೆಟ್ಟಿ ಮೂಡಾಯೂರು ಇವರನ್ನು ಶಾಸಕರು ಶಾಲ್ ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ಶುಭಾಶಯಗಳು ಮತ್ತು ಅಮೂಲ್ಯ ಆಶೀರ್ವಾದಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈ ಗೌರವವು ನನ್ನ ಮೇಲಿನ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದ್ದು, ಜನಸೇವೆಗೆ ಇನ್ನೂ ಹೆಚ್ಚಿನ ಬದ್ಧತೆಯಿಂದ ಕಾರ್ಯನಿರ್ವಹಿಸಲು ಸದಾ ಪ್ರೇರಣೆಯಾಗಲಿದೆ” ಎಂದು ಹೇಳಿದರು.

ತಾಲೂಕಿನ ಜನಪ್ರಿಯ ನಾಯಕ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಹೆಮ್ಮೆಯ ಶಾಸಕರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಬೆಳ್ತಂಗಡಿ ತಾಲೂಕಿನ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು. ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರು, ಬಂಟ ಸಮಾಜದ ಎಲ್ಲಾ ನಿರ್ದೇಶಕರು ಹಾಗೂ ಸಮಾಜದ ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here