






ಮಡಂತ್ಯಾರು:ತಾಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಆಗಸ್ಟ್ 7ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಒಳ ಕ್ರೀಡಾಂಗಣ ಉಜಿರೆಯಲ್ಲಿ ನಡೆಯಿತು.


ಈ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಜಿಯಾನ್ ಸಿಕ್ವೆರಾ ರವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಮತ್ತು ಜೀತನ್ ಸಿಕ್ಕೇರಾ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೆರಿಯನ್ ಡಿಸೋಜ ಮತ್ತು ಮಂಜುನಾಥರವರು ತರಬೇತಿಯನ್ನು ನೀಡಿರುತ್ತಾರೆ.









