ನೀರಚಿಲುಮೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

0

ಉಜಿರೆ: ನೀರಚಿಲುಮೆ ಸರ್ಕಾರಿ ಶಾಲೆ ಸಮೀಪದ ತಿರುವಿನಲ್ಲಿ ಆ.11ರಂದು ಬೆಳಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಸನತ್ (30) ಅವರನ್ನು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಮಡಂತ್ಯಾರು ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಅವರ ಪುತ್ರ ಎಂದು ಗುರುತಿಸಲಾಗಿದೆ.

ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಪಘಾತದಿಂದಾಗಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು.

LEAVE A REPLY

Please enter your comment!
Please enter your name here