ಗುರುವಾಯನಕೆರೆ ಸರ್ಕಾರಿ ಶಾಲೆಯಲ್ಲಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಕ್ಲಾಸ್ ಆನ್ ವೀಲ್ಸ್’: ಉಚಿತ ಕಂಪ್ಯೂಟರ್ ತರಬೇತಿ

0

ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣವನ್ನು ಮತ್ತಷ್ಟು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಮಂಗಳೂರಿನ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳ್ತಂಗಡಿಯಲ್ಲಿ ‘ಕ್ಲಾಸ್ ಆನ್ ವೀಲ್ಸ್’ ಮೊಬೈಲ್ ಕಂಪ್ಯೂಟರ್ ಲ್ಯಾಬ್ ಆರಂಭಗೊಂಡಿದೆ.

ಬೆಳ್ತಂಗಡಿ ತಾಲೂಕಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಈ ವಿಶೇಷ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಆ.11ರಂದು ಗುರುವಾಯನಕೆರೆಯ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಹರೀಶ್ ಪೂಂಜ ಉದ್ಘಾಟಿಸಿದರು.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಆಧುನಿಕ ಕಂಪ್ಯೂಟರ್ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಸಿದ್ಧಪಡಿಸಿರುವ ಈ ಬಸ್‌ನಲ್ಲಿ ಅಗತ್ಯ ಕಂಪ್ಯೂಟರ್ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ. ಗ್ರಾಮೀಣ ಭಾಗದ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತೆ ಹಾಗೂ ಡಿಜಿಟಲ್ ಕೌಶಲ್ಯಗಳನ್ನು ಕಲಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ಗ್ರಾಮೀಣ ವಿದ್ಯಾರ್ಥಿಗಳಿಗೂ ತಂತ್ರಜ್ಞಾನ ಶಿಕ್ಷಣದ ಸಮಾನ ಅವಕಾಶ ದೊರೆಯಬೇಕು ಎಂಬ ಆಶಯದೊಂದಿಗೆ ಆರಂಭವಾಗುತ್ತಿರುವ ‘ಕ್ಲಾಸ್ ಆನ್ ವೀಲ್ಸ್’ ಯೋಜನೆ ತಾಲೂಕಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಹೊಸ ಕಲಿಕೆಯ ಅವಕಾಶವಾಗಲಿದೆ.ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಪದಾಧಿಕಾರಿಗಳು, ಶಾಲೆಯ‌ ಶಿಕ್ಷಕ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here