ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಕಬ್ / ಬುಲ್ ಬುಲ್ ತೃತೀಯ ಚರಣ ಮತ್ತು ಸುವರ್ಣ ಗರಿ ಪರೀಕ್ಷೆ

0

ಭಾರತ್ ಸೈಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಬೆಳ್ತಂಗಡಿ ಸ್ಥಳೀಯ ಸಂಸ್ಥೆ, ಹಾಗೂ ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಆ11ರಂದು 2026-27 ನೇ ಸಾಲಿನ ಜಿಲ್ಲಾ ಮಟ್ಟದ ಎರಡನೇ ಹಂತದ ತೃತೀಯ ಚರಣ ಕಬ್ ಮತ್ತು ಸುವರ್ಣ ಗರಿ ಬುಲ್ ಬುಲ್ ಪರೀಕ್ಷಾ ಶಿಬಿರದ ಯಶಸ್ವಿಯಾಗಿ ನಡೆಯಿತು.

ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಇವರು ವಹಿಸಿಕೊಂಡು ಶುಭ ಹಾರೈಸಿದರು.ಶಿಬಿರವನ್ನು ವಾಣಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಕೃಷ್ಣಪ್ಪ ಗೌಡ ಸವಣಾಲು ಇವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಅವರು ಗಣ್ಯ ಅತಿಥಿಗಳು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರನ್ನು ಆತ್ಮೀಯವಾಗಿ ಸ್ವಾಗತಿಸಿದರು.ಮುಖ್ಯ ಅತಿಥಿಗಳಾಗಿ ವಿಷ್ಣು ಪ್ರಕಾಶ್ ಎಂ ಪ್ರಾಂಶುಪಾಲರು, ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ, ಪ್ರಸಾದ್ ಕುಮಾರ್, ಆಡಳಿತಾಧಿಕಾರಿ ವಾಣಿ ಶಿಕ್ಷಣ ಸಂಸ್ಥೆ,ಬೆಳ್ತಂಗಡಿ, ಭರತ್ ರಾಜ್ ಕೆ ರಾಜ್ಯ ಸಹಾಯಕ ಸಂಘಟನಾ ಆಯುಕ್ತರು, ಪ್ರಮೀಳಾ ಕಾರ್ಯದರ್ಶಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆ, ಕಬ್ ವಿಭಾಗದ ನಾಯಕರಾಗಿ ಭಾರತಿ ನಾಯಕ LT ಮತ್ತು ಶ್ರೀಮತಿ ಸಂಧ್ಯಾ ALT ಉಪಸ್ಥಿತರಿದ್ದರು.

ಬೆಳ್ತಂಗಡಿ ತಾಲೂಕಿನ ದೈಹಿಕ ಶಿಕ್ಷಣ ಪರಿವಿಕ್ಷಣಾಧಿಕಾರಿ ಶ್ರೀ ಪ್ರಭಾಕರ್ ಇವರು ಭೇಟಿ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.

ಒಟ್ಟು 70 ಕಬ್ ಮತ್ತು ಒಟ್ಟು 109 ಬುಲ್ ಬುಲ್ಸ್ ಒಟ್ಟು 179 ವಿದ್ಯಾರ್ಥಿಗಳು ಪರೀಕ್ಷಾ ಶಿಬಿರದಲ್ಲಿ ಭಾಗವಹಿಸಿದರು.ವಾಣಿ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಸುಹಾಸಿನಿ ಎ ವಂದಾನಾರ್ಪಣಗೈದರು. ಶಿಕ್ಷಕಿ, ಕಬ್ ಮಾಸ್ಟರ್ ವಿಜೇತಾ ಕೆ ಎನ್ ಕಾರ್ಯಕ್ರಮ ನಿರೂಪಿಸಿದರು.

ಸೈಟ್ಸ್ ಮತ್ತು ಗೈಡ್ಸ್ ಹಾಗೂ ಕಬ್, ಬುಲ್ ಬುಲ್ ಶಿಕ್ಷಕರು ಮತ್ತು ಸೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಸಂಪೂರ್ಣ ಸಹಕಾರವನ್ನು ನೀಡಿದರು.

LEAVE A REPLY

Please enter your comment!
Please enter your name here