ತಿಮ್ಮಣಬೆಟ್ಟು ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ

0

ವೇಣೂರು: ಕರಿಮಣೇಲು ಗ್ರಾಮದ ಗ್ರಾಮೀಣ ಪ್ರದೇಶದಲ್ಲಿರುವ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ತಿಮ್ಮಣಬೆಟ್ಟು ಇಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಹಾಗೂ ಮೂಡುಬಿದರೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಹೇಮರಾಜ್ ಬೆಳ್ಳಿಬೀಡು ರವರು ಉಚಿತವಾಗಿ ನೀಡಿದ ಬರವಣಿಗೆಯ ಪುಸ್ತಕಗಳು ಹಾಗೂ ಇತರ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮವನ್ನು ದ್ವೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಕೆ. ಹೇಮರಾಜ್ ಬೆಳ್ಳಿಬೀಡು ಇವರು ಗ್ರಾಮೀಣ ಪ್ರದೇಶದ ಮಕ್ಕಳು ಹಲವಾರು ಸೌಲಭ್ಯಗಳಿಂದ ವಂಚಿತರಾಗಿದ್ದು ಇಂತಹ ಮಕ್ಕಳಿಗೆ ಪ್ರೋತ್ಸಾಹ ದೊರೆತಾಗ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ವಿದ್ಯೆಯು ಯಾರು ಕಸಿಯಲಾಗದ ಸಂಪತ್ತು ವಿದ್ಯೆಯು ಮಕ್ಕಳ ಭವಿಷ್ಯವನ್ನು ರೂಪಿಸುವ ಅತಿ ಅಮೂಲ್ಯ ಸಂಪತ್ತಾಗಿದ್ದು ತಮ್ಮಲ್ಲಿರುವ ಪ್ರತಿಭೆಯ ಮೂಲಕ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಕಳೆದ ವರ್ಷವೂ ಎಲ್ಲಾ ವಿದ್ಯಾರ್ಥಿಗಳಿಗೆ ಇಡೀ ಶೈಕ್ಷಣಿಕ ವರ್ಷಕ್ಕೆ ಅಗತ್ಯವಿರುವ ಬರವಣಿಗೆಯ ಪುಸ್ತಕ ಹಾಗೂ ಇತರ ಪರಿಕರಗಳನ್ನು ವಿತರಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದ್ದರು ಈ ವೇದಿಕೆಯಲ್ಲಿ ಬೆಳ್ತಂಗಡಿ ಬಿ ಆರ್ ಸಿ ಕೇಂದ್ರದ ಬಿ ಐ ಇ ಆರ್‌ ಟಿ ಆದ ಜಗದೀಶ್ ಭಟ್. ಮೂಡುಬಿದರೆ ಜೈನ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮಹಾವೀರ ಜೈನ್ ಮೂಡು ಕೊಡಿ. ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ರಾಜು ನಾಯ್ಕ್ ಶಾಲಾ ಮುಖ್ಯೋಪಾಧ್ಯಾಯ ಸಚಿನ್ ಬೇಗೂರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here