







ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ಭವಾನಿಶಂಕರ್ ಎನ್. ಇವರ ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಗ್ಯಾರಂಟಿ ಅನುಷ್ಟಾನ ಸಮಿತಿ ಕಛೇರಿಯಲ್ಲಿ ನಡೆಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೆಸ್ಕಾಂ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಛೇರಿಗಳ ಮೂಲಕ ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆಯನ್ನು ಪರಿಶೀಲಿಸಲಾಯಿತು.
ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು. ಗೃಹಲಕ್ಷ್ಮೀ ಯೋಜನೆಯಡಿ ಪ್ರಸ್ತುತ 59204 ಫಲಾನುಭವಿಗಳಿದ್ದು, ಆಗಸ್ಟ್-2023 ರಿಂದ ಮೇ 2026 ರವರೆಗೆ 340,31,64,000/-ರೂ ಸಹಾಯಧನ ದೊರೆತಿರುವುದಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರು ಸಭೆಗೆ ಮಾಹಿತಿ ನೀಡಿದರು. ಗೃಹಜ್ಯೋತಿ ಯೋಜನೆಯಡಿ ಉಜಿರೆ ಉಪವಿಭಾಗದಲ್ಲಿ 2026ರ ಜೂನ್ 27197 ಕುಟುಂಬಗಳಿಗೆ 1,27,61,895/- ರೂ, ಬೆಳ್ತಂಗಡಿ ಉಪವಿಭಾಗದಲ್ಲಿ 2026ರ ಜೂನ್ 45896 ಕುಟುಂಬಗಳಿಗೆ 88,25,00,852/-ರೂ ಸಹಾಯಧನ ದೊರತಿದ್ದು ತಾಲೂಕಿಗೆ ಈವರೆಗೆ 1,32,87,63,553/- ರೂ ಸಹಾಯಧನ ದೊರೆತಿರುವುದಾಗಿ ಮೆಸ್ಕಾಂ ಇಲಾಖೆಯ ಸಹಾಖೆಯಕ ಕಾರ್ಯಪಾಲಕ ಅಭಿಯಂತರರು ಸಭೆಗೆ ತಿಳಿಸಿದರು. ತಾಲೂಕಿನ ಅರ್ಹ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವು ಪ್ರಗತಿಯಲ್ಲಿದ್ದು, ದಿನಾಂಕ 15/08/2026ರೊಳಗೆ ಪೂರ್ಣಗೊಳಿಸಲು ಇಲಾಖೆಯಿಂದ ಸೂಚಿಸಿರುವುದರಿಂದ ಪರಿಶೀಲನೆಗೆ ಬಾಕಿ ಇರುವ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಪಡೆದು ಸರ್ವೆಯನ್ನು ಪೂರ್ಣಗೊಳಿಸುವಂತೆ ಮೆಸ್ಕಾಂ ಇಲಾಖೆಗೆ ಗ್ಯಾರಂಟಿ ಯೋಜನೆಯ ಅಧ್ಯಕ್ಷರು ಸೂಚಿಸಿದರು.
ತಾಲೂಕಿನಲ್ಲಿ ಸುಮಾರು 4000 ಸಾವಿರ ಫಲಾನುಭವಿಗಳ ವಿವರಗಳು ತಾಂತ್ರಿಕ ಕಾರಣಗಳಿಂದ ಪರಿಶೀಲನೆಗೆ ಬಾಕಿ ಇರುತ್ತದೆ ಎಂದು ಮೆಸ್ಕಾಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದ್ದು, ಆದುದರಿಂದ, Data Not Found/Customer No Records ಮೊದಲಾದ ತಾಂತ್ರಿಕ ಕಾರಣಗಳಿಂದ ನೋಂದಾವಣೆಯಾಗದ ಗೃಹಜ್ಯೋತಿ ಫಲಾನುಭವಿಗಳ ಸರ್ವೆಯ ತಾಂತ್ರಿಕತ್ರಕ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಇಂಧನ ಇಲಾಖೆಗೆ ಪತ್ರ ವ್ಯವಹಾರ ನಡೆಸಲು ಸಭೆಯಲ್ಲಿ ನಿರ್ಣಹಿಸಲಾಯಿತು.


ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಜುಲೈ 2026ರ ವರೆಗೆ ತಾಲೂಕಿನಲ್ಲಿ ಒಟ್ಟು 48452 ಪಡಿತರ ಚೀಟಿಗಳಲ್ಲಿ 45326 ಪಡಿತರ ಚೀಟಿಗಳಿಗೆ ವಿತರಿಸಲಾಗಿ ಶೇಕಡಾ 93.55% ರಂತೆ 18953 ಕ್ವಿಂಟಾಲ್ ಪಡಿತರ ಅಕ್ಕಿ ವಿತರಿಸಲಾಗಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ ಇ-ಕೆವೈಸಿ ಯಾಗಿ 5 ವರ್ಷ ಪೂರ್ಣಗೊಳಿಸಿದ ಪಡಿತರ ಚೀಟಿಯ ಪಟ್ಟಿಯನ್ನು ನೀಡಲಾಗಿದ್ದು, ಸದರಿ ಪಟ್ಟಿಯಲ್ಲಿರುವ ಎಲ್ಲಾ ಪಡಿತರ ಚೀಟಿಯ ಸದಸ್ಯರು ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕಾಗಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ 48386(, BPL+AAY) ಪಡಿತರ ಚೀಟಿಗಳಿದ್ದು, ಈ ಪೈಕಿ 37532(BPL+AAY) ಪಡಿತರ ಚೀಟಿಯಲ್ಲಿರುವ ಸದಸ್ಯರು ಮರು ಇ-ಕೆವೈಸಿ ಮಾಡಿಸಬೇಕಾಗಿರುತ್ತದೆ ಎಂದು ಆಹಾರ ನಿರೀಕ್ಷಕರು ಸಭೆಗೆ ವಿವರ ನೀಡಿದರು

ಶಕ್ತಿ ಯೋಜನೆಯಡಿ ಧರ್ಮಸ್ಥಳ ಘಟಕದ ಬಸ್ಸುಗಳ ಮೂಲಕ 2026ರ ಜುಲೈ ಗಳಲ್ಲಿ 742925 ಮಹಿಳಾ ಪ್ರಯಾಣಿಕರು ಯೋಜನೆಯ ಸವಲತ್ತನ್ನು ಪಡೆದಿದ್ದು, ಜೂನ್-2023 ರಿಂದ ಈವರೆಗೆ ರೂ.116,58,76,460/- ಖರ್ಚು ಭರಿಸುವುದಾಗಿ ಧರ್ಮಸ್ಥಳ ಘಟಕದ ಮೇಲ್ವಿಚಾಲಕರು ಸಭೆಗೆ ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 8107 ಫಲಾನುಭವಿಗಳಿದ್ದು, ಬೆಳ್ತಂಗಡಿ ತಾಲೂಕಿನ 1192 ಅಭ್ಯರ್ಥಿಗಳಿಗೆ ಡಿ.ಬಿ.ಟಿ ಮೂಲಕ ಸಹಾಯಧನವನ್ನು ವಿತರಿಸಲಾಗಿದ್ದು, ಈವರೆಗೆ 3,26,19,000 ರೂ.ಗಳನ್ನು ಸರ್ಕಾರದಿಂದ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಶ್ರೀಮತಿ ಮಂಜೂಷರವರು ತಿಳಿಸಿದರು
ಸಭೆಯಲ್ಲಿ ತಾಲೂಕು ಪಂಚ ಗ್ಯಾರಂಟಿ ಅನುಷ್ಟಾನ ಸಮಿತಿಯ ಸದಸ್ಯರಾದ ವಂದನಾ ಕುಮಾರಿ, ಮೆರಿಟಾ ಪಿಂಟೋ, ವೀರಪ್ಪ ಮೊಯ್ಲಿ, ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ಕೇಶವ ನಾಯ್ಕ, ಅಬ್ದುಲ್ ಸಲಾಂ. ಸತೀಶ ಹೆಗ್ಡೆ ಹಾಗೂ ನೋಡೆಲ್ ಅಧಿಕಾರಿಯಾದ ಹೆರಾಲ್ಡ್ ಸ್ವಿಕ್ವೇರಾ ಇವರು ಉಪಸ್ಥಿತರಿದ್ದರು.









