






ಶಿಬರಾಜೆ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ (ರಿ.), ಶಿಬರಾಜೆ ಪಾದೆ, ಕಳೆಂಜ ಗ್ರಾಮ, ಬೆಳ್ತಂಗಡಿ ತಾಲೂಕು ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಇವರ ಸಹಕಾರದೊಂದಿಗೆ ಆಯೋಜಿಸಲಾಗಿರುವ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಆಮಂತ್ರಣ ಪತ್ರಿಕೆಯನ್ನು ಡಿ. ಹರ್ಷೇಂದ್ರ ಕುಮಾರ್ ಬಿಡುಗಡೆಗೊಳಿಸಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಸೆಪ್ಟೆಂಬರ್ 6, 2026ರಂದು ಶಿಬರಾಜೆ ಪಾದೆ ಮೈದಾನದಲ್ಲಿ ನಡೆಯಲಿದೆ.ಆಮಂತ್ರಣ ಪತ್ರಿಕೆ ಬಿಡುಗಡೆ ಸಂದರ್ಭದಲ್ಲಿ ಆಚರಣಾ ಸಮಿತಿಯ ಗೌರವಾಧ್ಯಕ್ಷ ನಿತ್ಯಾನಂದ ರೈ, ಅಧ್ಯಕ್ಷ ಸಂತೋಷ್ ಜೈನ್, ಕಾರ್ಯದರ್ಶಿ ಧನಂಜಯ ಗೌಡ, ಕೋಶಾಧಿಕಾರಿ ಶ್ರೀಧರ್ ರಾವ್ ಕಾಯಡ, ಉಪಾಧ್ಯಕ್ಷ ಸಂಜೀವ ದೇವಾಡಿಗ, ಸಮಿತಿ ಸದಸ್ಯ ಬಾಲಕೃಷ್ಣ ದೇವಾಡಿಗ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸ್ಥಾಪಕ ಅಧ್ಯಕ್ಷ ಡಾ. ಜಯಕೀರ್ತಿ ಜೈನ್ ಉಪಸ್ಥಿತರಿದ್ದರು.


ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿಭಾವದಿಂದ ಹಾಗೂ ವೈಭವಯುತವಾಗಿ ನಡೆಸಲು ಸಮಿತಿ ಸಿದ್ಧತೆಗಳನ್ನು ಕೈಗೊಂಡಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಸಮಿತಿ ಮನವಿ ಮಾಡಿದೆ.









