






ಉಜಿರೆ : ಅಣಬೆ ಬೇಸಾಯವು ಕಡಿಮೆ ಸ್ಥಳ, ಕಡಿಮೆ ಬಂಡವಾಳ ಹಾಗೂ ಕಡಿಮೆ ಅವಧಿಯಲ್ಲಿ ಉತ್ತಮ ಆದಾಯ ಗಳಿಸಲು ಸಹಕಾರಿಯಾಗುವ ಕೃಷಿ ಆಧಾರಿತ ಸ್ವಉದ್ಯೋಗವಾಗಿದ್ದು, ವೈಜ್ಞಾನಿಕ ವಿಧಾನಗಳನ್ನು ಅಳವಡಿಸಿಕೊಂಡು ಗುಣಮಟ್ಟದ ಅಣಬೆ ಉತ್ಪಾದನೆಗೆ ಮುಂದಾಗಬೇಕು ಎಂದು ಕೃಷಿ ಇಲಾಖೆ *ಪುತ್ತೂರು ವಿಭಾಗದ *ಉಪ ಕೃಷಿ ನಿರ್ದೇಶಕ ಶಿವಶಂಕರ ಹೆಚ್ ದಾನೆಗೊಂಡರೆ ಕರೆ ನೀಡಿದರು.

ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ 10 ದಿನಗಳ ಕಾಲ ನಡೆದ *ಅಣಬೆ ಬೇಸಾಯ ತರಬೇತಿ ಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣಪತ್ರ ವಿತರಣೆ ನೆರವೇರಿಸಿದ ಮಾತನಾಡಿದವರು ಕೃಷಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಅವರು ಅಣಬೆ ಬೇಸಾಯದಲ್ಲಿ ವೈಜ್ಞಾನಿಕ ತಂತ್ರಜ್ಞಾನ ಹಾಗೂ ಗುಣಮಟ್ಟದ ಉತ್ಪಾದನೆಯ ಮಹತ್ವದ ಕುರಿತು ಮಾರ್ಗದರ್ಶನ ನೀಡಿದರು.

ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಸುನಿಲ್ ಜಿ. ನಾಯ್ಕೆ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.



ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಎಲಿಯಮ್ ಲಾನ್ಸಿ ರೆಬೆಲ್ಲೊ ಹಾಗೂ ಕುಮಾರಿ ನಿಶಾ ಅವರು ತರಬೇತಿಯ ಅನುಭವಗಳನ್ನು ಹಂಚಿಕೊಂಡರು. ತರಬೇತಿಯ ಮೂಲಕ ಅಣಬೆ ಬೇಸಾಯದ ಕುರಿತು ಪ್ರಾಯೋಗಿಕ ಜ್ಞಾನ ಹಾಗೂ ಉದ್ಯಮ ಆರಂಭಿಸುವ ಆತ್ಮವಿಶ್ವಾಸ ದೊರೆತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮವನ್ನು ಸಂಸ್ಥೆಯ ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಅವರು ನಿರೂಪಿಸಿದರು. ಹಿರಿಯ ಉಪನ್ಯಾಸಕ ಕರುಣಾಕರ ಕೆ. ಜೈನ್ ಅವರು ಧನ್ಯವಾದ ಸಮರ್ಪಿಸಿದರು.

ಕಾರ್ಯಕ್ರಮವು ಪುರಂದರ* ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು.ತರಬೇತಿ ಪಡೆದ ಶಿಬಿರಾರ್ಥಿಗಳು ಅಣಬೆ ಬೇಸಾಯವನ್ನು ಸ್ವಉದ್ಯೋಗವಾಗಿ ಅಳವಡಿಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗುವ ಸಂಕಲ್ಪದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿದರು.









