






ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವಠಾರದಲ್ಲಿ ನಡೆದ 80 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದ್ವಜಾರೋಹಣ ಕಾರ್ಯಕ್ರಮವನ್ನು ವೇಣೂರಿನ ವೈದ್ಯರಾದ ಡಾ. ಜಗದೀಶ್ ಚೌಟರವರು ನೆರವೇರಿಸಿದರು.



ಸಮಾರಂಭ ದ ಅಧ್ಯಕ್ಷತೆಯನ್ನು ದ.ಕ. ಜಿಲ್ಲಾ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಧರಣೇ0ದ್ರ ಕುಮಾರ್ ವಹಿಸಿದ್ದರು. ಸಮಾರಂಭದಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಪದ್ಮರಾಜ್ ಪೇರಿ, ಹೊಸಂಗಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರುಗಳಾದ ಶಾಂತ, ಆನಂದ ಬಂಗೇರ ಕೊಡಿಂಗೇರಿ, ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ರಾದ ಶ್ರೀಪತಿ ಉಪಾದ್ಯಾಯ, ತುಕಾರಾಮ ಸಾಲ್ಯಾನ್ ಹೊಸಂಗಡಿ, ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳು, ಸರ್ವ ಸದಸ್ಯರುಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹೊಸಂಗಡಿಯಲ್ಲಿ ಕಳೆದ 35 ವರ್ಷಗಳಿಂದ ವೈದ್ಯ ವೃತ್ತಿ ಮಾಡಿಕೊಂಡು ಬರುತ್ತಿದ್ದ ಡಾ. ಜಗದೀಶ್ ಚೌಟರವರಿಗೆ “ವೈದ್ಯ ರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು. ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ ಕಾರ್ಯದರ್ಶಿ ಸುಜಿತ್ ಕುಮಾರ್ ವಂದಿಸಿದರು.









